ಬೆಂಗಳೂರು: ಟೂಲ್‌ಕಿಟ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೆ ಒಳಗಾದ ದಿಶಾ ರವಿಯನ್ನು ಬಿಡುಗಡೆ ಮಾಡದಿದ್ದರೆ ರೈತರು ಬೀದಿಗಿಳಿದು ಹೋರಾಟ ಮಾಡಬೇಕಾಗುತ್ತದೆ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ಅಧ್ಯಕ್ಷ ಬಡಗಲಪುರ ನಾಗೇಂದ್ರ ಹೇಳಿದ್ದಾರೆ.ರೈತರ ಪ್ರತಿಭಟನೆಗೆ ಬೆಂಬಲಿಸಿದ ದಿಶಾ ರವಿಯನ್ನು ಕಾನೂನು ಬಾಹಿರವಾಗಿ ಬಂಧಿಸಲಾಗಿದೆ. ಹೀಗಾಗಿ ತಕ್ಷಣವೇ ಆಕೆಯನ್ನು ಬಿಡುಗಡೆ ಮಾಡಬೇಕು ಎಂದು ಅವರು ಆಗ್ರಹಿಸಿದ್ದಾರೆ.ಸರ್ಕಾರದ ವಿರುದ್ಧ ಮಾತನಾಡಿದವರಿಗೆ ರಾಷ್ಟ್ರದ್ರೋಹಿ ಬಿರುದು ಕಟ್ಟಲಾಗುತ್ತಿದೆ. ಕಾನೂನು ಬಾಹಿರವಾಗಿ ದೆಹಲಿ ಪೊಲೀಸರು ಕರ್ನಾಟಕದ ಯುವತಿಯನ್ನು ಬಂಧಿಸಿದ್ದಾರೆ. ಮುಂಬೈನಲ್ಲಿ ಹಲವಾರು ವಕೀಲರನ್ನು ಬಂಧಿಸಲಾಗಿದೆ. ಸರ್ವಾಧಿಕಾರಿಯಂತೆ ಕೇಂದ್ರ ಸರ್ಕಾರ ನಡೆದುಕೊಳ್ಳುತ್ತಿದೆ ಎಂದು ಅವರು ಆರೋಪಿಸಿದರು.Sign in to your account
Username or Email Address


Password

 Remember Me


