ಬೀದರ್: ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿಯನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಭೀಕರವಾಗಿ ಹತ್ಯೆ ಮಾಡಿದ ಘಟನೆ ಬೀದರ್ ನ ಹೊರ ವಲಯದ ಕೋಟೆ ಬಳಿ ನಡೆದಿದೆ.ಕೊಲೆಯಾದ ದುರ್ದೈವಿ ನಾರಾಯಣ್ ರಾವ್(61) ಆಗಿದ್ದಾನೆ. ನಾಪತ್ತೆಯಾಗಿದ್ದ ವ್ಯಕ್ತಿ ಶವ ಪತ್ತೆಯಾಗಿದೆ.ಎರಡು ದಿನಗಳ ಹಿಂದೆ ನಾರಾಯಣ್ ರಾವ್ ನಾಪತ್ತೆಯಾಗಿದ್ದರು. ಈ ಬಗ್ಗೆ ಕುಟುಂಬಸ್ಥರು ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದರು. ವ್ಯಕ್ತಿ ನಾಪತ್ತೆಯಾದ ದಿನವೇ ದುಷ್ಕರ್ಮಿಗಳು ವ್ಯಕ್ತಿಯನ್ನು ಕೊಲೆ ಮಾಡಿದ್ದಾರೆ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ.ವ್ಯಕ್ತಿಯ ಕೊಲೆಗೆ ನಿಖರವಾದ ಕಾರಣ ಇನ್ನೂ ತಿಳಿದು ಬಂದಿಲ್ಲ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಟೌನ್ ಪೊಲೀಸರು ಭೇಟಿ, ಪರಿಶೀಲನೆ ಮಾಡುತ್ತಿದ್ದಾರೆ.






 Advertisement 




Sign in to your account
Username or Email Address


Password

 Remember Me


