ಉಡುಪಿ: ನಾಳೆ ಬಲಿದಾನ ದಿನವಾಗಿದ್ದು, ಯಾರೂ ಪ್ರೇಮಿಗಳ ದಿನ ಆಚರಿಸಬಾರದು ಎಂದು ಭಜರಂಗದಳ ಕರೆ ನೀಡಿದೆ.ಭಜರಂಗದಳ ಕರ್ನಾಟಕ ದಕ್ಷಿಣ ಸಂಯೋಜಕ ಸುನಿಲ್ ಕೆ.ಆರ್. ಈ ಕುರಿತು ಮಾತನಾಡಿದ್ದು, ಎರಡು ವರ್ಷಗಳ ಹಿಂದೆ ಇದೇ ದಿನ ಪುಲ್ವಾಮಾದಲ್ಲಿ ದಾಳಿಯಾಗಿತ್ತು. ಭಯೋತ್ಪಾದಕರು ನಮ್ಮ ಯೋಧರನ್ನು ಹತ್ಯೆ ಮಾಡಿದ್ದರು. ಹೀಗಾಗಿ ಫೆಬ್ರವರಿ 14 ಪ್ರೇಮಿಗಳ ದಿನ ಅಲ್ಲ, ಬಲಿದಾನ ದಿನವನ್ನಾಗಿ ಆಚರಿಸಬೇಕು ಎಂದರು.ಜಗತ್ತಿಗೆ ಸಂಸ್ಕೃತಿಯನ್ನು ಕಳಿಸಿಕೊಟ್ಟ ದೇಶ ಭಾರತ. ಭಾರತದ ಮೇಲೆ ಪಾಶ್ಚಿಮಾತ್ಯ ಸಂಸ್ಕೃತಿಯ ದಾಳಿ ನಡೆಯುತ್ತಲೇ ಬಂದಿದೆ. ವ್ಯಾಲೆಂಟೈನ್ಸ್ ಡೇ ಯಿಂದ ನಮ್ಮ ಸಂಸ್ಕೃತಿ ನಾಶವಾಗುತ್ತದೆ. ಪ್ರೇಮಿಗಳ ದಿನಾಚರಣೆ ಮಾಡಿದರೆ ಯುವಜನಾಂಗ ಭಾರತೀಯ ಸಂಸ್ಕೃತಿಯಿಂದ ದೂರವಾಗುತ್ತದೆ. ಪ್ರೇಮಿಗಳ ದಿನಾಚರಣೆಯಿಂದ ಅನೈತಿಕ ಚಟುವಟಿಕೆ ಹೆಚ್ಚುತ್ತದೆ ಎಂದು ಸುನಿಲ್ ಕೆ.ಆರ್. ಹೇಳಿದ್ದಾರೆ.Sign in to your account
Username or Email Address


Password

 Remember Me


