ಹಾಸನ: ಸಮಸ್ಯೆಗೆ ಸ್ಪಂದಿಸದಿದ್ದರೆ ಸಭೆ, ಸಮಾರಂಭ ಯಾಕೆ ಮಾಡ್ತೀರಿ ಎಂದು ಬಿಜೆಪಿ ಕಾರ್ಯಕರ್ತರು ಸಭೆಯಲ್ಲಿ ಗದ್ದಲ ಮಾಡಿದ ಘಟನೆ ಹಾಸನ ಜಿಲ್ಲೆ ಬೇಲೂರು ಪಟ್ಟಣದಲ್ಲಿ ನಡೆದಿದೆ.ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಆಯ್ಕೆಯಾದ ಬಿಜೆಪಿ ಬೆಂಬಲಿತ ಸದಸ್ಯರಿಗೆ ಸನ್ಮಾನ ಮಾಡಲು ಬೇಲೂರಿನಲ್ಲಿ ಸಭೆ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಬ್ಯಾದನೆ ಗ್ರಾಮದ ಬಿಜೆಪಿ ಕಾರ್ಯಕರ್ತರು ನಮ್ಮ ಗ್ರಾಮದ ವಸಂತ್ ಎಂಬವರು ಆತ್ಮಹತ್ಯೆಗೆ ಶರಣಾಗಿದ್ದರು. ಆತ್ಮಹತ್ಯೆಗೆ ಪ್ರೇರಣೆ ಎಂದು ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್‍ಐಆರ್ ಹಾಕಿದ್ದಾರೆ. ಉದ್ದೇಶಪೂರ್ವಕವಾಗಿ ಪೊಲೀಸರು ನಮಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಕಾರ್ಯಕರ್ತರು ಆರೋಪಿಸಿದರು.ಈ ಬಗ್ಗೆ ಬಿಜೆಪಿ ಮುಖಂಡರ ಬಳಿ ಹೇಳಿಕೊಂಡರೆ ಯಾರೂ ನಮ್ಮ ಬೆಂಬಲಕ್ಕೆ ಬರುತ್ತಿಲ್ಲ. ಕಾರ್ಯಕರ್ತರ ಸಮಸ್ಯೆಗೆ ಸ್ಪಂದಿಸದಿದ್ದ ಮೇಲೆ ಯಾಕೆ ಸಭೆ ಸಮಾರಂಭ ಮಾಡುತ್ತಿದ್ದೀರಿ. ಎಲ್ಲಿವರೆಗೂ ಕಾರ್ಯಕರ್ತರ ಸಮಸ್ಯೆಗೆ ಸ್ಪಂದಿಸುವುದಿಲ್ಲವೋ ಅಲ್ಲಿಯವರೆಗೂ ಯಾವುದೇ ಸಭೆ, ಸಮಾರಂಭ ಮಾಡಬೇಡಿ ಎಂದು ಆಕ್ರೋಶ ಹೊರಹಾಕಿದ್ದಾರೆ.Sign in to your account
Username or Email Address


Password

 Remember Me


