ವಿಜಯಪುರ: ಭಿಕ್ಷುಕನೋರ್ವ ಅನುಮಾನಾಸ್ಪದ ರೀತಿಯಲ್ಲಿ ಕೊಲೆಯಾಗಿರುವ ಘಟನೆ ವಿಜಯಪುರದಲ್ಲಿ ಬೆಳಕಿಗೆ ಬಂದಿದೆ.ನಗರದ ವಿಶ್ವೇಶ್ವರ ಕಾಲೋನಿ ಸಿಟಿಬಸ್ ನಿಲ್ದಾಣದಲ್ಲಿ ಭಿಕ್ಷುಕನ ಮೃತದೇಹ ರಕ್ತದ ಮಡುವಿನಲ್ಲಿ ಬಿದ್ದಿರುವುದು ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಆದರ್ಶ ನಗರ ಪಿ ಎಸ್ ಐ ಶರಣಬಸಪ್ಪನವರಿಗೆ, ತನಿಖೆ ವೇಳೆ ಭಿಕ್ಷುಕ ಕಳೆದ ಮೂರ್ನಾಲ್ಕು ತಿಂಗಳುಗಳಿಂದ ಬಸ್ ನಿಲ್ದಾಣದಲ್ಲಿಯೇ ವಾಸಿಸುತ್ತಿದ್ದ ಎಂಬ ವಿಚಾರ ತಿಳಿದುಬಂದಿದೆ.ಆದರೆ ಭಿಕ್ಷುಕನ ಕೊಲೆಗೆ ಕಾರಣ ಏನು ಎಂಬ ಸತ್ಯ ತಿಳಿದು ಬಂದಿಲ್ಲ. ಮುಖ ಗುರುತು ಪತ್ತೆಯಾಗದ ಕಾರಣ ಪೊಲೀಸರು ಘಟನೆ ಕುರಿತಂತೆ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದಾರೆ.Sign in to your account
Username or Email Address


Password

 Remember Me


