ಬೆಂಗಳೂರು: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಕೇಂದ್ರ ಶಿಸ್ತು ಸಮಿತಿ ಶೋಕಾಸ್ ನೋಟೀಸ್ ಜಾರಿ ಮಾಡಿದೆ.ಸಿಎಂ ಯಡಿಯೂರಪ್ಪ ನಾಯಕತ್ವದ ವಿರುದ್ಧ ಹೇಳಿಕೆ, ಸರ್ಕಾರದ ವಿರುದ್ಧ ಬಹಿರಂಗ ಹೇಕೆ ಕುರಿತು ಕೇಂದ್ರ ಶಿಸ್ತು ಸಮಿತಿ ನೋಟಿಸ್ ಜಾರಿ ಮಾಡಿದೆ. ಈಗ ಅಳೆದು ತೂಗಿ ಬಿಜೆಪಿ ಕೇಂದ್ರ ಶಿಸ್ತು ಸಮಿತಿ ಶೋಕಾಸ್ ನೋಟೀಸ್ ನೀಡಿದೆ.ಪಕ್ಷ ವಿರೋಧಿ ಚಟುವಟಿಕೆ, ಅಶಿಸ್ತು ಉಲ್ಲೇಖಿಸಿ ನೋಟೀಸ್ ಜಾರಿ ಮಾಡಿದೆ. ನಾಯಕತ್ವ ವಿಚಾರ, ಸಿಎಂ ಬದಲಾವಣೆ, ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಟೀಕೆಗಾಗಿ ಶೋಕಾಸ್ ನೋಟಿಸ್ ನೀಡಲಾಗಿದೆ.ಶಾಸಕ ಬಸನಗೌಡ ಯತ್ನಾಳ್ ಗೆ ಮೂಗುದಾರ ಹಾಕುವಂತೆ ಸಿಎಂ ಯಡಿಯೂರಪ್ಪ ಮನವಿ ಮಾಡಿದ್ದರು. ಕೇಂದ್ರ ಶಿಸ್ತು ಸಮಿತಿ ಕ್ರಮಕ್ಕೆ ಸಿಎಂ ಆಗ್ರಹಿಸಿದ್ದರು. ನಾಯಕತ್ವ ಬದಲಾವಣೆ ವಿಚಾರದಲ್ಲಿ ಪದೇ ಪದೇ ಮಾತನಾಡುತ್ತಿದ್ದಕ್ಕೆ ಆಕ್ರೋಶ ವ್ಯಕ್ತವಾಗಿತ್ತು. ಯತ್ನಾಳ್ ಬಿಜೆಪಿ ಶಾಸಕ ಸ್ಥಾನಕ್ಕೆ ಸ್ಪರ್ಧಿಸಲು ಹೈಕಮಾಂಡ್ ಬಿ ಫಾರಂ ನೀಡಿದೆ. ಕ್ರಮ ಕೈಗೊಳ್ಳಲು ಕೇಂದ್ರ ಶಿಸ್ತು ಸಮಿತಿಯೇ ನಿರ್ಧರಿಸಬೇಕು. ಹೀಗಾಗಿ ರಾಜ್ಯ ಬಿಜೆಪಿ ಇಷ್ಟು ದಿನ ಕೈ ಕಟ್ಟಿ ಕುಳಿತಿತ್ತು.ಈ ಮೂಲಕ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಗೆ ಒಟ್ಟು ಎರಡು ಸಲ ಶೋಕಾಸ್ ನೋಟಿಸ್ ನೀಡಿದಂತಾಗಿದೆ. 2019ರ ಅಕ್ಟೋಬರ್‍ನಲ್ಲಿ ಉತ್ತರ ಕರ್ನಾಟಕ ಪ್ರವಾಹದ ಬಗ್ಗೆ ಬೇಸರದಿಂದ ದೆಹಲಿ ವರಿಷ್ಠರ ವಿರುದ್ಧವೇ ವಾಗ್ದಾಳಿ ನಡೆಸಿದ್ದ ವಿಚಾರಕ್ಕೆ ಕೇಂದ್ರದ ಶಿಸ್ತು ಸಮಿತಿಯಿಂದ ಕಾರಣ ಕೇಳಿ ನೋಟಿಸ್ ನೀಡಲಾಗಿತ್ತು. ಈ ವೇಳೆ ನಾನು ನನ್ನ ಇತಿಮಿತಿಯಲ್ಲೇ ಮಾತಾಡಿದ್ದೇನೆ, ಯಾರ ವಿರುದ್ಧವೂ ಮಾತಾಡಿಲ್ಲ, ಜನರ ಬವಣೆ ನೋಡಿ ಮಾತಾಡಿದೆ ಎಂದು ಯತ್ನಾಳ್ ಕಾರಣ ಕೊಟ್ಟಿದ್ದರು.Sign in to your account
Username or Email Address


Password

 Remember Me


