ಬೆಂಗಳೂರು: ಕಾಂಗ್ರೆಸ್ ಸೇರ್ಪಡೆಯಾಗುವ ಕುರಿತು ಶಾಸಕ, ಜೆಡಿಎಸ್ ನಾಯಕ ಮಧು ಬಂಗಾರಪ್ಪ ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮನೆಗೆ ಭೇಟಿ ನೀಡಿ ಚರ್ಚೆ ನಡೆಸಿದರು.ಜೆಡಿಎಸ್ ನಾಯಕ ಮಧು ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆಯಾಗುವ ಕುರಿತು ತುಂಬಾ ದಿನಗಳಿಂದ ಚರ್ಚೆ ನಡೆಯುತ್ತಲೇ ಇದ್ದು, ಇದೀಗ ಕ್ಲೈಮ್ಯಾಕ್ಸ್ ಹಂತ ತಲುಪಿರುವ ಬಗ್ಗೆ ಸುಳಿವು ಸಿಕ್ಕಿದೆ. ಇಂದು ಸದಾಶಿವನಗರದ ಡಿಕೆಶಿ ನಿವಾಸದಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.ಕಾಂಗ್ರೆಸ್ ಸೇರ್ಪಡೆಗೆ ಮುಹೂರ್ತ ಫಿಕ್ಸ್ ಮಾಡುವ ಕುರಿತು ಸಮಾಲೋಚನೆ ನಡೆಸಲಾಗಿದ್ದು, ಶೀಘ್ರದಲ್ಲೇ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಉಭಯ ನಾಯಕರು ವಿಸ್ತøತ ಚರ್ಚೆಯನ್ನು ಸಹ ನಡೆಸಿದ್ದಾರೆ ಎನ್ನಲಾಗಿದೆ.Sign in to your account
Username or Email Address


Password

 Remember Me


