ಕಲಬುರುಗಿ: ಯುವಕನೋರ್ವನನ್ನು ಮಾರಾಕಾಸ್ತ್ರಗಳಿಂದ ಇರಿದು, ತಲೆ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ತಾಲೂಕಿನ ಸಿಂದಗಿ ಹೊರವಲಯದಲ್ಲಿ ನಡೆದಿದೆ.ಕೊಲೆಯಾದ ಯುವಕನನ್ನು ವೀರೇಶ್ ಬೀಮಳ್ಳಿ (28) ಎಂದು ಗುರುತಿಸಲಾಗಿದೆ. ವೀರೇಶ್ ಕಲಬುರಗಿ ನಗರದ ದುಬೈ ಕಾಲೋನಿ ನಿವಾಸಿಯಾಗಿದ್ದು, ಸೂಪರ್ ಮಾರ್ಕೆಟ್‍ನ ಪಾತ್ರೆ ಅಂಗಡಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದನು. ನಿನ್ನೆ ಮುಂಜಾನೆ ಕೆಲಸಕ್ಕೆ ಹೋಗಿದ್ದ ವೀರೇಶ್‍ನನ್ನು ಅಂಗಡಿಯಿಂದ ಮೂರು ಜನ ಬಂದು ಕರೆದುಕೊಂಡು ಹೋಗಿದ್ದರು. ಅವರೊಂದಿಗೆ ತೆರಳಿದ್ದ ವಿರೇಶ್ ಮಧ್ಯಾಹ್ನದಿಂದ ನಾಪತ್ತೆಯಾಗಿದ್ದನು. ಏಕಾಏಕಿ ನಾಪತ್ತೆಯಾದ ವಿಷಯ ತಿಳಿದ ವೀರೇಶ್ ಕುಟುಂಬಸ್ಥರು ಚೌಕ್ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದರು.ಇಂದು ವೀರೇಶ್ ಮೃತದೇಹ ನಿರ್ಜನ ಪ್ರದೇಶದಲ್ಲಿ ಪತ್ತೆಯಾಗಿದೆ. ದುಷ್ಕರ್ಮಿಗಳು ಮಾರಾಕಾಸ್ತ್ರದಿಂದ ಇರಿದು ನಂತರ ಕಲ್ಲು ಎತ್ತಿಹಾಕಿ ಕೊಲೆ ಮಾಡಿ ಗುಂಡಿಯಲ್ಲಿ ಶವ ಎಸೆದು ಪರಾರಿಯಾಗಿದ್ದಾರೆ. ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ಕೊಲೆ ಮಾಡಲಾಗಿದೆ ಎಂದು ತಿಳಿದುಬಂದಿದ್ದು, ಕಲಬರುಗಿ ಗ್ರಾಮೀಣ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.






 Advertisement 




Sign in to your account
Username or Email Address


Password

 Remember Me


