ಬೆಂಗಳೂರು: ರಾಜ್ಯಪಾಲರಾದ ವಜುಭಾಯ್ ವಾಲಾ ಅವರನ್ನು ಶ್ರೀರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾನದ ನಿಮಿತ್ತ ಇಂದು ಹಿಂದೂ ಸಂಘಟನೆಯ ಮುಖಂಡರು ಭೇಟಿ ಮಾಡಿದರು.ಬಜರಂಗದಳದ ರಾಷ್ಟ್ರೀಯ ಸಹ ಸಂಯೋಜಕರಾದ ಸೂರ್ಯನಾರಾಯಣ, ಪ್ರಾಂತ ವಿಶೇಷ ಸಂಪರ್ಕ ಪ್ರಮುಖ್ ಮಂಜುನಾಥ ಸ್ವಾಮಿ ಹಾಗೂ ಬೆಂಗಳೂರು ಉತ್ತರ ವಿಭಾಗ ವಿಶ್ವ ಹಿಂದೂ ಪರಿಷತ್‌ ಅಧ್ಯಕ್ಷರಾದ ಮುನಿರಾಜು ಅವರು ಭೇಟಿ ಮಾಡಿದರು.ಈ ಸಂದರ್ಭದಲ್ಲಿ ರಾಜ್ಯಪಾಲರು ತಾವು ರಾಮ ಮಂದಿರದ ಕಾರಸೇವೆಯಲ್ಲಿ ಪಾಲ್ಗೊಂಡಿದ್ದರ ಬಗ್ಗೆ ಅಭಿಮಾನ ಮತ್ತು ಹೆಮ್ಮೆ ವ್ಯಕ್ತಪಡಿಸಿದರು. ಇದೊಂದು ರಾಷ್ಟ್ರ ಕಾರ್ಯ, ರಾಮ ಮಂದಿರ ನಿರ್ಮಾಣದಿಂದ ರಾಷ್ಟ್ರ ನಿರ್ಮಾಣವಾದಂತೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.Sign in to your account
Username or Email Address


Password

 Remember Me


