ದಾವಣಗೆರೆ: ಸ್ಯಾಂಡಲ್‍ವುಡ್ ಸ್ಟಾರ್ ನಟ ಸುದೀಪ್ ವಾಲ್ಮೀಕಿ ಸಮಾವೇಶದಲ್ಲಿ ಭಾಗಿಯಾಗಿದ್ದರು. ಈ ವೇಳೆ ಅಭಿಮಾನಿಗಳು ನಟನನ್ನು ನೋಡಲು ಮುಗಿಬಿದ್ದಿದ್ದರಿಂದ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ.ದಾವಣಗೆರೆಯ ರಾಜನಹಳ್ಳಿಯಲ್ಲಿ ಸುದೀಪ್ ಅವರನ್ನು ನೋಡಲು ಅಭಿಮಾನಿಗಳು ಮುಗಿಬಿದ್ದಿದ್ದರು. ತಮ್ಮ ನೆಚ್ಚಿನ ಬರುತ್ತಿದ್ದಂತೆ, ಅಭಿಮಾನಿಗಳು ವೇದಿಕೆಯತ್ತ ನುಗ್ಗಿದ್ದಾರೆ. ಈ ವೇಳೆ ನೂಕುನುಗ್ಗಲಾಟವಾಗಿದೆ. ಕುರ್ಚಿ, ಸೋಪಾ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು, ಈ ವೇಳೆ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಲಾಠಿ ಚಾರ್ಜ್ ಮಾಡಲಾಗಿದೆ.ವಾಲ್ಮೀಕಿ ಸಮಾವೇಶದಲ್ಲಿ ಸುದೀಪ್ ಅವರಿಗೆ ವಾಲ್ಮೀಕಿ ರತ್ನ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ. ವಾಲ್ಮೀಕಿ ಶ್ರೀಗಳು ಸುದೀಪ್ ಅವರಿಗೆ ಪ್ರೀತಿಯಿಂದ ಸನ್ಮಾನ ಮಾಡಿದ್ದಾರೆ.






 Advertisement 




Sign in to your account
Username or Email Address


Password

 Remember Me


