ರಾಯಚೂರು: ಮಸ್ಕಿ ಬೈ ಎಲೆಕ್ಷನ್ ಹಿನ್ನೆಲೆ ಸರ್ಕಾರದಿಂದ ಕ್ಷೇತ್ರಕ್ಕೆ ಭರ್ಜರಿ ಗಿಫ್ಟ್ ಸಿಕ್ಕಿದೆ. ಮಸ್ಕಿ ತಾಲೂಕಿನ ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಮಂಜೂರಾತಿ ಸಿಕ್ಕಿದ್ದು, ಒಟ್ಟು 17 ಕೆರೆಗಳಿಗೆ ನೀರು ತುಂಬಿಸುವ 457.18 ಕೋಟಿ ರೂಪಾಯಿಯ ಯೋಜನೆಗೆ ಆಡಳಿತಾತ್ಮಕ ಮಂಜೂರಾತಿ ಸಿಕ್ಕಿದೆ. ಮೊದಲ ಕಂತಾಗಿ ಆರ್ಥಿಕ ಇಲಾಖೆ 82.33 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ. ತಕ್ಷಣ ಟೆಂಡರ್ ಕರೆಯುವಂತೆಯೂ ಸೂಚನೆ ನೀಡಲಾಗಿದೆ.ಇತ್ತೀಚಿಗೆ ಕನಕ ಹಾಗು ಹೇಮರಡ್ಡಿ ಮಲ್ಲಮ್ಮ ಭವನಕ್ಕೆ 2.50 ಕೋಟಿ ರೂಪಾಯಿ ಮಂಜೂರಾತಿ ನೀಡಲಾಗಿತ್ತು. ನಿರ್ಮಾಣವಾಗಿರುವ ಕಟ್ಟಡಗಳು ವಿವಿಧ ಕಾಮಗಾರಿಗಳಿಗೆ ಈಗ ಒಂದೊಂದಾಗೆ ಚಾಲನೆ ನೀಡಲಾಗುತ್ತಿದೆ. ನಿನ್ನೆಯಷ್ಟೇ ಕ್ಷೇತ್ರದ ವಟಗಲ್ ನಲ್ಲಿ 1 ಕೋಟಿ ರೂಪಾಯಿ ವೆಚ್ಚದಲ್ಲಿ ಎರಡು ಇಂದಿರಾಗಾಂಧಿ ವಸತಿ ಶಾಲೆ ಆರಂಭಿಸಲಾಗಿದೆ. ಮಸ್ಕಿ ಬೈ ಎಲೆಕ್ಷನ್ ಇಷ್ಟರಲ್ಲಿಯೇ ಘೋಷಣೆಯಾಗುವ ಸಾಧ್ಯತೆಯಿದ್ದು, ಚುನಾವಣೆ ಗೆಲ್ಲಲು ಬಿಜೆಪಿ ಕಾರ್ಯತಂತ್ರ ನಡೆಸಿದೆ.ಸರ್ಕಾರದ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿ ಮತ ಸೆಳೆಯುವ ತಂತ್ರಗಾರಿಕೆಯಂತೂ ನಡೆದಿದೆ. ಮಸ್ಕಿ ಬೈ ಎಲೆಕ್ಷನ್ ನಲ್ಲಿ ಪ್ರತಾಪಗೌಡ ಬಿಜೆಪಿ ಅಭ್ಯರ್ಥಿಯಾಗಲಿದ್ದು, ಚುನಾವಣಾ ಉಸ್ತುವಾರಿಯನ್ನ ಬಿ.ವೈ.ವಿಜಯೇಂದ್ರ, ಶ್ರೀರಾಮುಲು, ರವಿಕುಮಾರ್, ಡಾ.ಶಿವರಾಜ್ ಪಾಟೀಲ್, ರಾಜೂಗೌಡ, ನೇಮಿರಾಜ್ ನಾಯಕ್ ವಹಿಸಿಕೊಂಡಿದ್ದಾರೆ.ಒಂದೆಡೆ ಎನ್‍ಆರ್ ಬಿ ಸಿ 5 ಎ ಕಾಲುವೆಗಾಗಿ ಪಾಮನಕಲ್ಲೂರಿನಲ್ಲಿ ನಡೆಯುತ್ತಿರುವ ಹೋರಾಟ 80 ನೆಯ ದಿನಕ್ಕೆ ಕಾಲಿಟ್ಟಿದೆ. ರೈತರ ಹೋರಾಟದ ಮಧ್ಯೆಯೇ ಸಣ್ಣ ನೀರಾವರಿ ಇಲಾಖೆಯಿಂದ ಕೆರೆ ತುಂಬಿಸುವ ಯೋಜನೆಗೆ ಅನುಮೋದನೆ ನೀಡಲಾಗಿದೆ.Sign in to your account
Username or Email Address


Password

 Remember Me


