ಬಳ್ಳಾರಿ: ಹೊಸಪೇಟೆ ತಾಲೂಕಿನ ರಾಷ್ಟ್ರೀಯ ಹೆದ್ದಾರಿ-50ರ ಟನಲ್ ಬಳಿ ಬೊಲೆರೋ ವಾಹನ ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿ ಹೊಸಪೇಟೆಯ ಕ್ಷೇತ್ರ ಶಿಕ್ಷಣಾಧಿಕಾರಿ ಪಿ. ಸುನಂದಾ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.ರಾಷ್ಟ್ರೀಯ ಹೆದ್ದಾರಿ-50ರ ಟನಲ್ ಬಳಿ ಶಿಕ್ಷಣಾಧಿಕಾರಿ ಪಿ. ಸುನಂದಾ ಬೊಲೆರೋ ವಾಹನದಲ್ಲಿ ಚಲಿಸುತ್ತಿದ್ದ ವೇಳೆ ಅಪರಿಚಿತ ಲಾರಿ ಏಕಾಏಕಿ ಬಂದು ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಬೊಲೆರೋ ವಾಹನ ಪಲ್ಟಿಯಾಗಿ ಬಿದ್ದಿದೆ. ಲಾರಿ ಚಾಲಕ ಅಪಘಾತ ನಡೆದ ತಕ್ಷಣ ಸ್ಥಳದಿಂದ ಪರಾರಿಯಾಗಿದ್ದಾನೆ.ಅಪಘಾತದಲ್ಲಿ ಬಿಇಒ ಸುನಂದಾ ಸೇರಿದಂತೆ ನಾಲ್ವರಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು, ಗಾಯಾಳುಗಳನ್ನು ಹೊಸಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೊಸಪೇಟೆ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.






 Advertisement 




Sign in to your account
Username or Email Address


Password

 Remember Me


