ಬೆಂಗಳೂರು: ಇಂದು ಕರ್ನಾಟಕದಲ್ಲಿ 531 ಮಂದಿಗೆ ಕೊರೊನಾ ಬಂದಿದ್ದು, ಆಸ್ಪತ್ರೆಯಿಂದ 434 ಜನ ಡಿಸ್ಚಾರ್ಜ್ ಆಗಿದ್ದಾರೆ. ಮೂವರು ಕೊರೊನಾಗೆ ಬಲಿಯಾಗಿದ್ದಾರೆ.ಇಂದು ರಾಜ್ಯದಲ್ಲಿ ಒಟ್ಟು 96,872 ಮಂದಿಗೆ ಲಸಿಕೆ ನೀಡಲು ಯೋಜನೆ ಹಾಕಿಕೊಳ್ಳಲಾಗಿತ್ತು. ಈ ಪೈಕಿ 22,787(ಶೇ.24)ಮಂದಿ ಲಸಿಕೆ ಹಾಕಿಸಿಕೊಂಡಿದ್ದಾರೆ.ಇಂದು ಬಾಗಲಕೋಟೆ, ಹಾವೇರಿ, ಕೊಪ್ಪಳ, ರಾಮನಗರ ಮತ್ತು ವಿಜಯಪುರದಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 9,42,031ಕ್ಕೆ ಏರಿಕೆ ಆಗಿದೆ. ಈ ಪೈಕಿ 9,23,811 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ 5,968 ಸಕ್ರಿಯ ಪ್ರಕರಣಗಳಿವೆ.ಒಟ್ಟು ಇಲ್ಲಿಯವರೆಗೆ 12,233 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಸದ್ಯ 144 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು 4,215 ಆಂಟಿಜನ್ ಟೆಸ್ಟ್, 70,376 ಆರ್‍ಟಿ ಪಿಸಿಆರ್ ಸೇರಿದಂತೆ ಒಟ್ಟು 74,591 ಮಂದಿಗೆ ಪರೀಕ್ಷೆ ಮಾಡಲಾಗಿದೆ.ಬೆಂಗಳೂರು ನಗರದಲ್ಲಿ 318 ಮಂದಿಗೆ ಸೋಂಕು ಬಂದಿದೆ. ದಕ್ಷಿಣ ಕನ್ನಡ 28, ಧಾರವಾಡ 15, ಹಾಸನ 16, ತುಮಕೂರು 22, ಉತ್ತರ ಕನ್ನಡದ 12 ಮಂದಿಗೆ ಸೋಂಕು ಬಂದಿದೆ. ಒಟ್ಟು 144 ಮಂದಿ ಐಸಿಯುನಲ್ಲಿದ್ದು, ಬೆಂಗಳೂರಿನಲ್ಲಿ 72 ಕಲಬುರಗಿ 10, ಮೈಸೂರು 5, ಉಡುಪಿ 6, ಮತ್ತು ದಕ್ಷಿಣ ಕನ್ನಡದಲ್ಲಿ 6 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.






 Advertisement 




Sign in to your account
Username or Email Address


Password

 Remember Me


