ಮಡಿಕೇರಿ: ಕಾಲೇಜು ಸಮೀಪದಲ್ಲೇ ಇದ್ದ ಬಾರಿಗೆ ಹೋಗಿ ಎಣ್ಣೆ ಪಾರ್ಟಿ ಮಾಡುತ್ತಿದ್ದ ವಿದ್ಯಾರ್ಥಿಗಳನ್ನು ಕಾಲೇಜಿನ ಪ್ರಾಂಶುಪಾಲರೊಬ್ಬರು ರೆಡ್ ಹ್ಯಾಂಡ್ ಅಗಿ ಹಿಡಿದು ಕಪಾಳಕ್ಕೆ ಹೊಡೆದ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ಪಟ್ಟಣದಲ್ಲಿ ನಡೆದಿದೆ.ವಿರಾಜಪೇಟೆ ನಗರದ ಪ್ರತಿಷ್ಠಿತ ಕಾಲೇಜೊಂದರ ಐದು ವಿದ್ಯಾರ್ಥಿಗಳು ಸಮವಸ್ತ್ರದಲ್ಲಿ ಬಾರಿಗೆ ಹೋಗಿ ಎಣ್ಣೆ ಪಾರ್ಟಿ ಮಾಡಿಕೊಂಡು ಎಂಜಾಯ್ ಮಾಡುತ್ತಿದ್ದರು. ವಿಷಯ ತಿಳಿದ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಮದಲೈ ಮುತ್ತು ಅವರು ಬಾರಿಗೆ ತೆರಳಿ ವಿದ್ಯಾರ್ಥಿಗಳನ್ನು ರೆಡ್ ಹ್ಯಾಂಡ್ ಆಗಿ ಹಿಡಿದು ಬುದ್ಧಿವಾದ ಹೇಳಿ ಇಬ್ಬರಿಗೆ ಕಪಾಳ ಮೋಕ್ಷ ಮಾಡಿದ್ದಾರೆ.ಪ್ರಾಂಶುಪಾಲರಾದ ಮದಲೈ ಮುತ್ತು ಇಬ್ಬರಿಗೆ ಕಪಾಳ ಮೋಕ್ಷ ಮಾಡುತ್ತಿದ್ದಂತೆ, ಜೊತೆಗಿದ್ದ ವಿದ್ಯಾರ್ಥಿಯೋರ್ವ ಅಲ್ಲಿಂದ ಕಾಲ್ಕಿಳಲು ಮುಂದಾಗಿದ್ದಾನೆ. ತಕ್ಷಣವೇ ಆ ವಿದ್ಯಾರ್ಥಿಯನ್ನು ಹಿಡಿದು ಆತನಿಗೂ ಬುದ್ಧಿವಾದ ಹೇಳಿ ಕಳುಹಿಸಿಕೊಟ್ಟಿದ್ದಾರೆ.ವಿದ್ಯಾರ್ಥಿಗಳಿಗೆ ಬಾರ್‍ನಲ್ಲಿ ಎಣ್ಣೆ ಸಪ್ಲೈ ಮಾಡಿದ ಬಾರಿನ ಮ್ಯಾನೇಜರ್ ಗೆ ಕ್ಲಾಸ್ ತೆಗೆದುಕೊಂಡಿರುವ ಕಾಲೇಜಿನ ಪ್ರಾಂಶುಪಾಲರು, ಶಾಲೆ ಕಾಲೇಜಿಗೆ ಬರುವ ವಿದ್ಯಾರ್ಥಿಗಳ ಸಮವಸ್ತ್ರಗಳನ್ನು ನೋಡಿ ವಿದ್ಯಾರ್ಥಿಗಳಿಗೆ ಬುದ್ದಿ ಮಾತು ಹೇಳಿ ಕಾಲೇಜಿಗೆ ಕಳುಹಿಸುವ ಜವಾಬ್ದಾರಿ ತಮಗೂ ಇರುತ್ತದೆ. ಆದರೆ ಹಣದ ಆಸೆಗೆ ಈ ರೀತಿಯಲ್ಲಿ ವಿದ್ಯಾರ್ಥಿಗಳಿಗೆ ನೀವೇ ಮದ್ಯವನ್ನು ನೀಡಿರುವುದು ಸರಿಯಲ್ಲ, ಈ ಕುರಿತು ನಿಮ್ಮ ಬಾರಿನ ಮೇಲೆ ಸಂಬಂಧಿಸಿದ ಇಲಾಖೆಗೆ ದೂರು ನೀಡುವುದಾಗಿ ಅಕ್ರೋಶ ವ್ಯಕ್ತಪಡಿಸಿದರು.ವಿದ್ಯಾರ್ಥಿಗಳಿಗೆ ಕಪಾಳ ಮೋಕ್ಷ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಈಗ ಹರಿದಾಡುತ್ತಿದೆ.






 Advertisement 




Sign in to your account
Username or Email Address


Password

 Remember Me


