ಬೆಂಗಳೂರು: ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ಶಾಲಾ, ಕಾಲೇಜುಗಳ ದಾಖಲಾತಿ ಅವಧಿಯನ್ನು ಫೆ.20 ರವರೆಗೆ ವಿಸ್ತರಿಸುವಂತೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಸೂಚನೆ ನೀಡಿದ್ದಾರೆ.ಈ ವರ್ಷ ಶಾಲಾ, ಕಾಲೇಜುಗಳು ತಡವಾಗಿ ಆರಂಭವಾಗಿರುವ ಹಿನ್ನೆಲೆಯಲ್ಲಿ ತರಗತಿಗಳ ದಾಖಲಾತಿಯನ್ನು ಫೆಬ್ರವರಿ 20ರ ವರೆಗೆ ವಿಸ್ತರಿಸಲಾಗಿದೆ. ಈ ವರ್ಷದ ದಾಖಲಾತಿಗೆ ಫೆಬ್ರವರಿ 6 ಕಡೆಯ ದಿನವಾಗಿತ್ತು. ಹಲವಾರು ವಿದ್ಯಾರ್ಥಿಗಳು ಇನ್ನೂ ತರಗತಿಗಳಿಗೆ ದಾಖಲಾಗಲು ಸಾಧ್ಯವಾಗಿಲ್ಲ. ವಿದ್ಯಾರ್ಥಿಗಳ ಮನವಿ ಮೇರೆಗೆ ದಾಖಲಾತಿಯನ್ನು ಫೆ.20ರವರೆಗೆ ವಿಸ್ತರಿಸಬೇಕೆಂದು ಸಚಿವರು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರಿಗೆ ಟಿಪ್ಪಣಿಯಲ್ಲಿ ತಿಳಿಸಿದ್ದಾರೆ.ಈ ವರ್ಷ ತರಗತಿಗಳು ವಿಳಂಬವಾಗಿ ಆರಂಭವಾಗಿರುವ ಹಿನ್ನೆಲೆ ದಾಖಲಾತಿಯ ಸಮಯ ವಿಸ್ತರಣೆ ಮಾಡುವಂತೆ ವಿದ್ಯಾರ್ಥಿಗಳು ಕೋರಿದ್ದರು. ವಿದ್ಯಾರ್ಥಿಗಳ ಮನವಿಗೆ ಸ್ಪಂದಿಸಿದ ಸಚಿವ ಸುರೇಶ್ ಕುಮಾರ್ ದಾಖಲಾತಿಗೆ ಅವಧಿ ವಿಸ್ತರಿಸಲು ಸೂಚಿಸಿದ್ದಾರೆ.Sign in to your account
Username or Email Address


Password

 Remember Me


