ಬೆಂಗಳೂರು: ಇಂದು ಕರ್ನಾಟಕದಲ್ಲಿ 430 ಮಂದಿಗೆ ಕೊರೊನಾ ಬಂದಿದ್ದು, ಆಸ್ಪತ್ರೆಯಿಂದ 470 ಜನ ಡಿಸ್ಚಾರ್ಜ್ ಆಗಿದ್ದಾರೆ. ಮೂವರು ಕೊರೊನಾಗೆ ಬಲಿಯಾಗಿದ್ದಾರೆ.ಇಂದು ರಾಜ್ಯದಲ್ಲಿ ಒಟ್ಟು 88,403 ಮಂದಿಗೆ ಲಸಿಕೆ ನೀಡಲು ಯೋಜನೆ ಹಾಕಿಕೊಳ್ಳಲಾಗಿತ್ತು. ಈ ಪೈಕಿ 27,825(ಶೇ.31)ಮಂದಿ ಲಸಿಕೆ ಹಾಕಿಸಿಕೊಂಡಿದ್ದಾರೆ.ಇಂದು ಹಾವೇರಿ, ರಾಯಚೂರು ಮತ್ತು ಯಾದಗಿರಿಯಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 9,41,500ಕ್ಕೆ ಏರಿಕೆ ಆಗಿದೆ. ಈ ಪೈಕಿ 9,23,337 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ 5,874 ಸಕ್ರಿಯ ಪ್ರಕರಣಗಳಿವೆ.ಒಟ್ಟು ಇಲ್ಲಿಯವರೆಗೆ 12,230 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಸದ್ಯ 144 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು 4,564 ಆಂಟಿಜನ್ ಟೆಸ್ಟ್, 69,555 ಆರ್ ಟಿ ಪಿಸಿಆರ್ ಸೇರಿದಂತೆ ಒಟ್ಟು 74,119 ಮಂದಿಗೆ ಪರೀಕ್ಷೆ ಮಾಡಲಾಗಿದೆ.ಬೆಂಗಳೂರು ನಗರದಲ್ಲಿ 217 ಮಂದಿಗೆ ಸೋಂಕು ಬಂದಿದೆ. ದಕ್ಷಿಣ ಕನ್ನಡ 17, ಬಳ್ಳಾರಿ, ಮೈಸೂರು 15 ತುಮಕೂರು 35, ಉಡುಪಿಯ 21 ಮಂದಿಗೆ ಸೋಂಕು ಬಂದಿದೆ. ಒಟ್ಟು 144 ಮಂದಿ ಐಸಿಯುನಲ್ಲಿದ್ದು, ಬೆಂಗಳೂರಿನಲ್ಲಿ 72 ಉಡುಪಿ 6, ಹಾಸನ 7, ಮತ್ತು ಕಲಬುರುಗಿಯಲ್ಲಿ 10 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.






 Advertisement 




Sign in to your account
Username or Email Address


Password

 Remember Me


