ಬೆಂಗಳೂರು: ಶ್ರೀರಾಮ ಮಂದಿರ ನಿಧಿ ಸಮರ್ಪಣಾ ಅಭಿಯಾನದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ವಿಎಚ್‌ಪಿ ಮುಖಂಡರು ಇಂದು ಭೇಟಿ ಮಾಡಿದರು.ವಿಶ್ವ ಹಿಂದೂ ಪರಿಷದ್ ನ ಪ್ರಾಂತ ವಿಶೇಷ ಸಂಪರ್ಕ ಪ್ರಮುಖ್ ಮಂಜುನಾಥ ಸ್ವಾಮಿ ಮತ್ತು ರಂಗಣ್ಣ ಭೇಟಿ ಮಾಡಿ ಅಭಿಯಾನದ ಬಗ್ಗೆ ತಿಳಿಸಿದರು.ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಸಂಬಂಧ ದೇಶಾದ್ಯಂತ ಮನೆ ಮನೆಗೆ ತೆರಳಿ ನಿಧಿ ಸಂಗ್ರಹಣೆ ಮಾಡಲಾಗುತ್ತಿದೆ. ಕರ್ನಾಟಕದಲ್ಲಿ ಆರ್‌ಎಸ್‌ಎಸ್‌, ವಿಎಚ್‌ಪಿ ಸೇರಿದಂತೆ ಹಿಂದೂಪರ ಸಂಘಟನೆಗಳ ನಾಯಕರು ಮನೆ ಮನೆಗೆ ಭೇಟಿ ನೀಡಿ ನಿಧಿ ಸಂಗ್ರಹಣೆ ಮಾಡುತ್ತಿದ್ದಾರೆ.Sign in to your account
Username or Email Address


Password

 Remember Me


