ಬೆಂಗಳೂರು: ಕೋರ್ಟ್‌ ಆವರಣದಲ್ಲಿ ಸಾಹಿತಿ ಭಗವಾನ್‌ ಮುಖಕ್ಕೆ ವಕೀಲೆಯೊಬ್ಬರು ಮಸಿ ಬಳಿದಿದ್ದಾರೆ.ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ಹಿನ್ನೆಲೆಯಲ್ಲಿ ವಕೀಲೆ ಮೀರಾ ರಾಘವೇಂದ್ರ ಖಾಸಗಿ ದೂರು ದಾಖಲಿಸಿದ್ದರು. ಇಂದು ಈ ಪ್ರಕರಣ ಸಂಬಂಧ ಜಾಮೀನು ವಿಚಾರಣೆಗೆ ಭಗವಾನ್‌ ಕೋರ್ಟ್‌ಗೆ ಆಗಮಿಸಿದ್ದರು. ಈ ವೇಳೆ ಮೀರಾ ರಾಘವೇಂದ್ರ ಭಗವಾನ್‌ ಮುಖಕ್ಕೆ ಮಸಿ ಬಳಿದಿದ್ದಾರೆ.ಇಷ್ಟು ವಯಸ್ಸು ಆಗಿದೆ. ಇನ್ನು ನಾಚಿಕೆಯಾಗಲ್ವಾ? ರಾಮನ ಬಗ್ಗೆ ಧರ್ಮದ ಬಗ್ಗೆ ಮಾತಾನಾಡ್ತೀರಾ ಅಂತಾ ಮಸಿ ಬಳಿದು ಮೀರಾ ಅವಾಜ್ ಹಾಕಿದ್ದಾರೆ. ನಾನು ಏನೇ ಬಂದ್ರೂ ಎದುರಿಸಲು ರೆಡಿ ಎಂದು ಮೀರಾ ಹೇಳಿದ್ದಾರೆ.ಬುದ್ಧಿಜೀವಿ, ಧರ್ಮ ವಿರೋಧಿ ಪ್ರೊ ಭಗವಾನ್ ಇಂದು ಕೋರ್ಟ್ ಕಟಕಟೆಗೆ ಹಾಜರಾಗಿ ಜಾಮೀನು ಪಡೆದುಕೊಂಡರು. ಅವರಿಗೆ ಮಸಿ ಬಳಿದು ತಕ್ಕ ಶಾಸ್ತಿ ಮಾಡಿದ್ದೇನೆ. ಜೈಶ್ರೀರಾಮ್ ಎಂದು ಮೀರಾ ರಾಘವೇಂದ್ರ ಟ್ವೀಟ್‌ ಮಾಡಿ ವಿಡಿಯೋ ಅಪ್ಲೋಡ್‌ ಮಾಡಿದ್ದಾರೆ.https://twitter.com/MeeraRaghavendr/status/1357233534646112259ಹಿಂದೂ ಧರ್ಮವೆಂಬುದೆ ಇಲ್ಲ. ಹಿಂದೂ ಧರ್ಮ ಅವಮಾನಕಾರ. ಮಾನ ಮರ್ಯಾದೆ ಇದ್ದವರು ಹಿಂದೂ ಧರ್ಮ ಬಳಸಬಾರದು ಎಂದು ಭಗವಾನ್‌ ಹೇಳಿಕೆ ನೀಡಿದ್ದರು. ಈ ಸಂಬಂಧ 2020ರ ಅಕ್ಟೋಬರ್‌ 10 ರಂದು ಭಗವಾನ್ ವಿರುದ್ಧ ಮೀರಾ ರಾಘವೇಂದ್ರ ಕ್ರಿಮಿನಲ್‌ ಕೇಸ್‌ ಹೂಡಿದ್ದರು.ಈ ಪ್ರಕರಣ ಸಂಬಂಧ ‌ ವಿಚಾರಣೆಗೆ ಹಾಜರಾಗುವಂತೆ ಭಗವಾನ್‌ಗೆ ಕೋರ್ಟ್ ಸಮನ್ಸ್‌ ಜಾರಿ ಮಾಡಿತ್ತು.ಸದಾ ನಮ್ಮ ಧರ್ಮವನ್ನೇ ಟಾರ್ಗೆಟ್ ಮಾಡುವ ವಿಚಾರವ್ಯಾಧಿ, ಬುದ್ಧಿಜೀವಿ #ಪ್ರೋಭಗವಾನ್ ಮೇಲೆ ಕಳೆದ ತಿಂಗಳು #ಬೆಂಗಳೂರು #ACMM ನ್ಯಾಯಾಲಯದಲ್ಲಿ ದಿ. 11.10.2020 ರ ಹೇಳಿಕೆ ಸಾಕ್ಷ್ಯಧಾರಗಳ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಿದ್ದೆ. ಹೇಳಿಕೆ ಹಾಗೂ ವಾದ ಆಲಿಸಿದ ಕೋರ್ಟ್ ವಿಚಾರಣೆಗೆ ಹಾಜರಾಗುವಂತೆ ಆರೋಪಿ ಭಗವಾನ್ ಗೆ #ಸಮನ್ಸ ಜಾರಿಗೊಳಿಸಿದೆ. pic.twitter.com/5qEsmW1D2v— Meera Raghavendra (@MeeraRaghavendr) December 17, 2020Sign in to your account
Username or Email Address


Password

 Remember Me


