ಹಾವೇರಿ: ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಮಾಸೂರಿನಲ್ಲಿ ಗ್ರಾಮಪಂಚಾಯ್ತಿ ವತಿಯಿಂದ ಸ್ವಚ್ಛತಾ ಆಂದೋಲನ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಈ ಸ್ವಚ್ಛತಾ ಕಾರ್ಯದಲ್ಲಿ ಹಾವೇರಿ ಹುಕ್ಕೇರಿಮಠದ ಸದಾಶಿವ ಶ್ರೀ, ಮಾಸೂರಿನ ಮಹಾಂತ ಶ್ರೀ ಹಾಗೂ ಕೂಡಲಮಠದ ಶ್ರೀಗಳು ಪೂರಕೆ ಹಿಡಿದು ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡಿದ್ದರು.ಮಾಸೂರಿನ ವರಕವಿ ಸರ್ವಜ್ಞನ ಪ್ರತಿಮೆ ಸುತ್ತಮುತ್ತವಿರುವ ಕಸ ತೆಗೆದು ಸ್ವಚ್ಛಗೊಳಿಸಲಾಯಿತು. ಹುಕ್ಕೇರಿ ಮಠದ ಶ್ರೀಗಳಿಗೆ ತಿಪ್ಪಾಯಿಕೊಪ್ಪದ ಮಹಂತದೇವರು, ಹಾವೇರಿ ಕೂಡಲದ ಗುರುನಂಜೇಶ್ವರ ಮಠದ ಮಹೇಶ್ವರ ಸ್ವಾಮೀಜಿಗಳು ಸ್ವಚ್ಛತಾ ಕಾರ್ಯಕ್ಕೆ ಸಾಥ್ ನೀಡಿದರು. ಅಲ್ಲದೆ ಈ ಕಾರ್ಯದಲ್ಲಿ ಗ್ರಾಮ ಪಂಚಾಯ್ತಿ ಸಿಬ್ಬಂದಿ ಹಾಗೂ ಕೆಲ ಜನರು ಭಾಗವಹಿಸಿದ್ದು ವಿಶೇಷವಾಗಿತ್ತು.ಈ ಸಂದರ್ಭದಲ್ಲಿ ಹುಕ್ಕೇರಿಮಠದ ಸದಾಶಿವಶ್ರೀಗಳು ಮಾತನಾಡಿ, ಪ್ರತಿಯೊಬ್ಬರು ಸ್ವಚ್ಛತಾ ಕಾರ್ಯಕ್ರಮ ನಡೆಸುವ ಮೂಲಕ ಆರೋಗ್ಯಕರ ವಾತಾವರಣ ನಿರ್ಮಿಸಿಕೊಳ್ಳುವಂತೆ ತಿಳಿಸಿದರು.Sign in to your account
Username or Email Address


Password

 Remember Me


