ಬಳ್ಳಾರಿ: ಫ್ಯಾನ್ ಬಿದ್ದು ಕಾರ್ಮಿಕನೊಬ್ಬ ಸಾವನ್ನಪ್ಪಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ.ಮೃತ ದುರ್ದೈವಿ ಕಾರ್ಮಿಕನನ್ನು ಜಿತೇಂದ್ರ ಸಿಂಗ್ ಎಂದು ಗುರುತಿಸಲಾಗಿದೆ. ಬಳ್ಳಾರಿ ಜಿಲ್ಲೆಯ ತೋರಣಗಲ್ಲಿನ ವಿದ್ಯಾನಗರದ ಜೆಎಸ್ ಡಬ್ಲ್ಯು ಸ್ಟೀಲ್ಸ್‍ನ ಉತ್ಪಾದನಾ ಘಟಕವೊಂದರಲ್ಲಿ ಈ ದುರ್ಘಟನೆ ಸಂಭವಿಸಿದೆ.ಸ್ಟೀಲ್ ಉತ್ಪಾದಕ ಘಟಕವೊಂದರಲ್ಲಿ ಕಾರ್ಯನಿರ್ವಹಿಸುತ್ತಿರುವಾಗ ಘಟಕದ ಫ್ಯಾನ್ ಹಠಾತ್ ಕೆಳಗಡೆ ಬಿದ್ದಿದೆ. ಆದ್ದರಿಂದ ಅಕ್ಕಪಕ್ಕದಲ್ಲಿದ್ದ ಕಬ್ಬಿಣದ ಸರಳುಗಳು ಆತನಿಗೆ ಚುಚ್ಚಿಕೊಂಡಿವೆ. ಕಳೆದ ಎರಡು ದಿನಗಳ ಹಿಂದೆ ಈ ಘಟನೆ ನಡೆದಿದ್ದು, ಗಂಭೀರ ಗಾಯಗೊಂಡಿದ್ದ ಆತನನ್ನ ಜಿಂದಾಲ್ ಸಂಜೀವಿನಿ ಆಸ್ಪತ್ರೆಗೆ ಚಿಕಿತ್ಸೆಗೆಂದು ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಇಂದು ಮುಂಜಾನೆ ಸಾವನ್ನಪ್ಪಿದ್ದಾನೆಂದು ತಿಳಿದುಬಂದಿದೆ.ಈ ಕುರಿತು ತೋರಣಗಲ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.






 Advertisement 




Sign in to your account
Username or Email Address


Password

 Remember Me


