ಹುಬ್ಬಳ್ಳಿ: ಬೈಕ್ ಹಿಂಬದಿ ಕುಳಿತಿದ್ದ ಸವಾರ ಆಯತಪ್ಪಿ ಕೆಳಗೆ ಬಿದ್ದ ವೇಳೆ ಹಿಂದಿನಿಂದ ಬಂದ ಕೆಎಸ್‍ಆರ್‍ಟಿಸಿ ಬಸ್ ಹರಿದು ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.ನಗರದ ಕಾರವಾರ ರಸ್ತೆಯ ಕೆಇಬಿ ಗ್ರಿಡ್ ಬಳಿ ಹುಬ್ಬಳ್ಳಿಯಿಂದ ಲಕ್ಷ್ಮೇಶ್ವರಕ್ಕೆ ಹೊರಟಿದ್ದ ಬಸ್ ಯುವಕನ ಮೇಲೆ ಹರಿದ ಪರಿಣಾಮ ಸ್ಥಳದಲ್ಲೇ ಸಾವಿಗೀಡಾದ್ದಾನೆ. ಬೈಕ್ ಸವಾರ ಕಾರನ್ನು ಓವರ್ ಟೇಕ್ ಮಾಡುವಾಗ ಹಿಂಬದಿ ಕುಳಿತಿದ್ದ ಯುವಕ ನಿಯಂತ್ರಣ ತಪ್ಪಿ ಕೆಳಗೆ ಬಿದ್ದಿದ್ದಾನೆ. ಅದೇ ಸಮಯದಲ್ಲಿ ಬಸ್ ಹಿಂದಿನಿಂದ ಬಂದು ಆತನ ತಲೆ ಮೇಲೆ ಹಾಯ್ದ ಪರಿಣಾಮ ದುರ್ಘಟನೆ ನಡೆದಿದೆ.ಮೃತ ಯುವಕ ಕೆಲವು ದಿನಗಳ ಹಿಂದೆಯಷ್ಟೇ ಉತ್ತರ ಪ್ರದೇಶದಿಂದ ಕೆಲಸಕ್ಕೆಂದು ಹುಬ್ಬಳ್ಳಿಗೆ ಬಂದಿದ್ದ ಆಗಮಿಸಿದ್ದ ಎಂಬ ಮಾಹಿತಿ ಲಭ್ಯವಾಗಿದ್ದು, ಆತನ ಹೆಸರು, ವಿವರವನ್ನ ಪೊಲೀಸರು ಕಲೆ ಹಾಕುತ್ತಿದ್ದಾರೆ.ಅಪಘಾತ ನಡೆಯುತ್ತಿದ್ದಂತೆ ಕಾರವಾರ ರಸ್ತೆಯಲ್ಲಿ ಕೆಲ ಕಾಲ ಸಂಚಾರ ಅಸ್ತವ್ಯಸ್ತಗೊಂಡಿತ್ತು. ತಕ್ಷಣವೇ ಸ್ಥಳಕ್ಕೆ ಆಗಮಿಸಿದ ಸಂಚಾರಿ ಠಾಣೆಯ ಪೊಲೀಸರು ಶವವನ್ನ ಕಿಮ್ಸ್ ಆಸ್ಪತ್ರೆಗೆ ರವಾನಿಸಿ ಸಂಚಾರ ಸುಗಮಗೊಳಿಸಿದರು. ಪೊಲೀಸರು ಯುವಕನ ವಿವರ ಕಲೆ ಹಾಕುತ್ತಿದ್ದು, ದಕ್ಷಿಣ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Sign in to your account
Username or Email Address


Password

 Remember Me


