ಬೆಂಗಳೂರು: ಇಂದು ಕರ್ನಾಟಕದಲ್ಲಿ 395 ಮಂದಿಗೆ ಕೊರೊನಾ ಬಂದಿದ್ದು, ಆಸ್ಪತ್ರೆಯಿಂದ 412 ಜನ ಡಿಸ್ಚಾರ್ಜ್ ಆಗಿದ್ದಾರೆ. ಮೂವರು ಕೊರೊನಾಗೆ ಬಲಿಯಾಗಿದ್ದಾರೆ.ಇಂದು ಬೆಳಗಾವಿಯಲ್ಲಿ ಮಾತ್ರ ಲಸಿಕೆ ವಿತರಣೆಯಾಗಿದ್ದು ಒಟ್ಟು 600 ಮಂದಿಗೆ ಲಸಿಕೆ ನೀಡಲು ಯೋಜನೆ ಹಾಕಿಕೊಳ್ಳಲಾಗಿತ್ತು. ಈ ಪೈಕಿ 141(ಶೇ.23)ಮಂದಿ ಲಸಿಕೆ ಹಾಕಿಸಿಕೊಂಡಿದ್ದಾರೆ.ಇಂದು ಚಾಮರಾಜನಗರ, ಬಾಗಲಕೋಟೆ, ರಾಮನಗರ, ಯಾದಗಿರಿಯಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 9,40,170ಕ್ಕೆ ಏರಿಕೆ ಆಗಿದೆ. ಈ ಪೈಕಿ 9,22,004 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ 5924 ಸಕ್ರಿಯ ಪ್ರಕರಣಗಳಿವೆ.ಒಟ್ಟು ಇಲ್ಲಿಯವರೆಗೆ 12,223 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಸದ್ಯ 148 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು 4765 ಆಂಟಿಜನ್ ಟೆಸ್ಟ್, 55,386 ಆರ್‍ಟಿ ಪಿಸಿಆರ್ ಸೇರಿದಂತೆ ಒಟ್ಟು 60,151 ಮಂದಿಗೆ ಪರೀಕ್ಷೆ ಮಾಡಲಾಗಿದೆ.ಬೆಂಗಳೂರು ನಗರದಲ್ಲಿ 199 ಮಂದಿಗೆ ಸೋಂಕು ಬಂದಿದೆ. ಚಿಕ್ಕಬಳ್ಳಾಪುರ 14, ದಕ್ಷಿಣ ಕನ್ನಡ 23, ಬಳ್ಳಾರಿ 11, ಮೈಸೂರು 28, ತುಮಕೂರು 18 ಮಂದಿಗೆ ಸೋಂಕು ಬಂದಿದೆ. ಒಟ್ಟು 148 ಮಂದಿ ಐಸಿಯುನಲ್ಲಿದ್ದು, ಬೆಂಗಳೂರಿನಲ್ಲಿ 74 ದಕ್ಷಿಣ ಕನ್ನಡ 6 ಹಾಸನ 7, ಮತ್ತು ಕಲಬುರುಗಿಯಲ್ಲಿ 13 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.






 Advertisement 




Sign in to your account
Username or Email Address


Password

 Remember Me


