ಕಲಬುರಗಿ: ಪಕ್ಷಕ್ಕಾಗಿ ಹಗಲಿರುಳು ಕೆಲಸ ಮಾಡಿದರು ಕೂಡಾ ಯಾರೂ ನನ್ನನ್ನು ಕೇರ್ ಮಾಡುತ್ತಿಲ್ಲ ಎಂದು ಕಲಬುರಗಿ ಜಿಲ್ಲೆ ಚಿತ್ತಾಪುರದ ಮಾಜಿ ಶಾಸಕ ವಾಲ್ಮೀಕಿ ನಾಯಕ್ ಕಣ್ಣೀರು ಹಾಕಿದ್ದಾರೆ.ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಬಿಜೆಪಿ ನಾಯಕರ ವರ್ತನೆಯಿಂದ ಬೇಸತ್ತು ಕಣ್ಣೀರು ಹಾಕಿದ್ದಾರೆ. ಯಾರ್ಯಾರಿಗೋ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಿದ್ದಾರೆ. ದೊಡ್ಡ ದೊಡ್ಡ ಸ್ಥಾನ ನೀಡಿದ್ದಾರೆ. ಆದರೆ ಕನಿಷ್ಟ ನನ್ನನ್ನು ನಿಗಮ ಮಂಡಳಿ ಅಧ್ಯಕ್ಷನನ್ನಾಗಿ ಕೂಡಾ ಮಾಡಿಲ್ಲಾ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.ಪಕ್ಷಕ್ಕಾಗಿ ಹಗಲಿರಳು ದುಡಿದ್ರು ಕೂಡಾ ಯಾರು ಕೇರ್ ಮಾಡ್ತಿಲ್ಲ. ರಾಜ್ಯ ಮತ್ತು ಕೇಂದ್ರದಲ್ಲಿ ನಮ್ಮದೇ ಸರ್ಕಾರ ಇದೆ. ಆದರೂ ಪಕ್ಷಕ್ಕಾಗಿ ದುಡಿದ ನನ್ನನ್ನು ಪರಿಗಣಿಸುತ್ತಿಲ್ಲ. ಸಿಎಂ ಯಡಿಯೂರಪ್ಪ ಸೇರಿದಂತೆ ಯಾರೂ ಕೇರ್ ಮಾಡ್ತಿಲ್ಲ. ನನಗೆ ಕನಿಷ್ಟ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಿ ಅಂತ ಕಣ್ಣೀರು ಸುರಿಸಿದ್ದಾರೆ.






 Advertisement 




Sign in to your account
Username or Email Address


Password

 Remember Me


