ಆನೇಕಲ್: ಮುಂಜಾನೆ ಸಂಭವಿಸಿದ ಭೀಕರ ಅಪಘಾತದಲ್ಲಿ ಐದು ಮಂದಿ ದಾರುಣವಾಗಿ ಮೃತಪಟ್ಟ ಘಟನೆ ತಮಿಳುನಾಡು ಈರೋಡ್‍ನ ಕಾವೇರಿಪಟ್ಟಣಂ ಬಳಿ ನಡೆದಿದೆ.ಘಟನೆಯಲ್ಲಿ ಬಸ್ಸಿನಿಂದ ಇಳಿಯುತ್ತಿದ್ದ ಪ್ಯಾಸೆಂಜರ್ ಹಾಗೂ ಓಮ್ನಿಯಲ್ಲಿದ್ದ ನಾಲ್ಕು ಜನ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತ ದುರ್ದೈವಿಗಳನ್ನು ಪ್ರಶಾಂತ್, ಲಿಂಗಾ, ಸುರೇಂದರ್, ಶಿವಕುಮಾರ್, ಓಮ್ನಿ ಚಾಲಕ ಹಾಗೂ ಬಸ್ ಪ್ಯಾಸೆಂಜರ್ ದೇವರಾಜು ಎಂದು ಗುರುತಿಸಲಾಗಿದೆ.ಸ್ನೇಹಿತರೆಲ್ಲ ಸೇರಿ ಈರೋಡ್ ಜಿಲ್ಲೆಯ ಭವಾನಿಯಿಂದ ಬೆಂಗಳೂರಿನ ವಂಡರ್ ಲಾ ಹೊರಟಿದ್ದರು. ಈ ಸಂದರ್ಭದಲ್ಲಿ ಅಂದರೆ ಮುಂಜಾನೆ 4 ಗಂಟೆ ಸುಮಾರಿಗೆ ಪ್ರವಾಸಿ ತಾಣಕ್ಕೆ ಹೋಗುವ ದಾರಿಯಲ್ಲಿ ಈ ದುರಂತ ಸಂಭವಿಸಿದೆ.ವ್ಯಕ್ತಿಯೊಬ್ಬರು ರಸ್ತೆ ದಾಟಲು ಯತ್ನಿಸಿದ್ದಾರೆ. ಹೀಗಾಗಿ ಬಸ್ಸಿನ ಚಾಲಕ ಬ್ರೇಕ್ ಹಾಕಿದ್ದಾನೆ. ಈ ವೇಳೆ ಹಿಂದಿನಿಂದ ಬಂದ ಓಮ್ನಿ ಬಸ್ಸಿನ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ. ವೇಗವಾಗಿ ಬಂದು ಡಿಕ್ಕಿ ಹೊಡೆದ ಪರಿಣಾಮ ಓಮ್ನಿ ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ. ಪರಿಣಾಮ 5 ಮಂದಿ ಸ್ಥಳದಲ್ಲಿ ಮೃತಪಟ್ಟರೆ ಓಮ್ನಿಯಲ್ಲಿದ್ದ ಗೌತಮ್, ಭರಣಿ ಹಾಗೂ ಅಶೋಕ್ ಎಂಬವರಿಗೆ ತೀವ್ರ ಗಾಯಗಳಾಗಿವೆ. ಗಾಯಾಳುಗಳನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.ಸ್ಥಳಕ್ಕೆ ಕಾವೇರಿಪಟ್ಟಣಂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.






 Advertisement 




Sign in to your account
Username or Email Address


Password

 Remember Me


