ಬೆಂಗಳೂರು: ಇಂದು ಕರ್ನಾಟಕದಲ್ಲಿ 464 ಮಂದಿಗೆ ಕೊರೊನಾ ಬಂದಿದ್ದು, ಆಸ್ಪತ್ರೆಯಿಂದ 547 ಜನ ಡಿಸ್ಚಾರ್ಜ್ ಆಗಿದ್ದಾರೆ. ಇಬ್ಬರು ಕೊರೊನಾಗೆ ಬಲಿಯಾಗಿದ್ದಾರೆ.ಇಂದು ಒಟ್ಟು 19,934 ಮಂದಿಗೆ ಲಸಿಕೆ ನೀಡಲು ಯೋಜನೆ ಹಾಕಿಕೊಳ್ಳಲಾಗಿತ್ತು. ಈ ಪೈಕಿ 6,063 (ಶೇ.30)ಮಂದಿ ಲಸಿಕೆ ಹಾಕಿಸಿಕೊಂಡಿದ್ದಾರೆ.ಇಂದು ಗದಗ, ಹಾವೇರಿ, ರಾಮನಗರ, ರಾಯಚೂರಿನಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 9,38,865 ಕ್ಕೆ ಏರಿಕೆ ಆಗಿದೆ. ಈ ಪೈಕಿ 9,20,657 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ 5,976 ಸಕ್ರಿಯ ಪ್ರಕರಣಗಳಿವೆ.ಒಟ್ಟು ಇಲ್ಲಿಯವರೆಗೆ 12,213 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಸದ್ಯ 147 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು 4,306 ಆಂಟಿಜನ್ ಟೆಸ್ಟ್, 69,182 ಆರ್‍ಟಿ ಪಿಸಿಆರ್ ಸೇರಿದಂತೆ ಒಟ್ಟು 73,488 ಪರೀಕ್ಷೆ ಮಾಡಲಾಗಿದೆ.ಎಂದಿನಂತೆ ಬೆಂಗಳೂರು ನಗರದಲ್ಲಿ 233 ಮಂದಿಗೆ ಸೋಂಕು ಬಂದಿದೆ. ಮೈಸೂರು 34, ತುಮಕೂರು 24, ದಕ್ಷಿಣ ಕನ್ನಡದ 28 ಮಂದಿಗೆ ಸೋಂಕು ಬಂದಿದೆ. ಒಟ್ಟು 147 ಮಂದಿಗೆ ಮಂದಿ ಐಸಿಯುನಲ್ಲಿದ್ದು, ಬೆಂಗಳೂರಿನಲ್ಲಿ 68 ಕಲಬುರಗಿ 12, ತುಮಕೂರು 5 ಮಂದಿ, ಉಡುಪಿಯಲ್ಲಿ 7 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.






 Advertisement 




Sign in to your account
Username or Email Address


Password

 Remember Me


