ಬೆಂಗಳೂರು: ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಶವ ಪತ್ತೆಯಾಗಿದ್ದು, ಘಟನಾ ಸ್ಥಳಕ್ಕೆ ವರ್ತೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಉಷಾ ಮೃತ ಮಹಿಳೆ. 2015ರಲ್ಲಿ ಉಷಾ ಮದುವೆ ರಂಜಿತ್ ಜೊತೆ ನಡೆದಿತ್ತು. ಪತಿಯ ಜೊತೆಯಲ್ಲಿ ವಾಸವಾಗಿದ್ದರು. ಉಷಾ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪತಿ ಹೇಳಿಕೆ ದಾಖಲಿಸಿದ್ದಾರೆ. ಆದರೆ ವರದಕ್ಷಿಣೆ ತರುವಂತೆ ಕಿರುಕುಳ ನೀಡಲಾಗುತ್ತಿತ್ತು ಎಂದು ಮಹಿಳೆಯ ಪೋಷಕರು ಆರೋಪಿಸಿದ್ದಾರೆ.ಈ ಸಂಬಂಧ ವರ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ತನಿಖೆ ನಡೆಸಲಾಗುತ್ತಿದೆ.Sign in to your account
Username or Email Address


Password

 Remember Me


