ಬೆಂಗಳೂರು: ಇಂದು ಕರ್ನಾಟಕದಲ್ಲಿ 468 ಮಂದಿಗೆ ಕೊರೊನಾ ಬಂದಿದ್ದು, ಆಸ್ಪತ್ರೆಯಿಂದ 607 ಜನ ಡಿಸ್ಚಾರ್ಜ್ ಆಗಿದ್ದಾರೆ. ಇಬ್ಬರು ಕೊರೊನಾಗೆ ಬಲಿಯಾಗಿದ್ದಾರೆ.ಇಂದು ಒಟ್ಟು 50,459 ಮಂದಿಗೆ ಲಸಿಕೆ ನೀಡಲು ಯೋಜನೆ ಹಾಕಿಕೊಳ್ಳಲಾಗಿತ್ತು. ಈ ಪೈಕಿ 17,832 (ಶೇ.35)ಮಂದಿ ಲಸಿಕೆ ಹಾಕಿಸಿಕೊಂಡಿದ್ದಾರೆ.ಇಂದು ಬಾಗಲಕೋಟೆ, ಕೊಪ್ಪಳ, ರಾಮನಗರ, ಯಾದಗಿರಿಯಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ9,38,40ಕ್ಕೆ ಏರಿಕೆ ಆಗಿದೆ. ಈ ಪೈಕಿ 9,20,110 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ 6,061 ಸಕ್ರಿಯ ಪ್ರಕರಣಗಳಿವೆ.ಒಟ್ಟು ಇಲ್ಲಿಯವರೆಗೆ 12,211 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಸದ್ಯ 148 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು 4,600 ಆಂಟಿಜನ್ ಟೆಸ್ಟ್, 63,932 ಆರ್ ಟಿ ಪಿಸಿಆರ್ ಸೇರಿದಂತೆ ಒಟ್ಟು 68,532 ಪರೀಕ್ಷೆ ಮಾಡಲಾಗಿದೆ.ಎಂದಿನಂತೆ ಬೆಂಗಳೂರು ನಗರದಲ್ಲಿ 264 ಮಂದಿಗೆ ಸೋಂಕು ಬಂದಿದೆ. ಮೈಸೂರು 30, ತುಮಕೂರು 30, ದಕ್ಷಿಣ ಕನ್ನಡದ 26 ಮಂದಿಗೆ ಸೋಂಕು ಬಂದಿದೆ.ದಕ್ಷಿಣ ಕನ್ನಡ 31, ಮೈಸೂರು 27, ಕಲಬುರಗಿ 20 ಮಂದಿಗೆ ಸೋಂಕು ಬಂದಿದೆ. ಒಟ್ಟು 148 ಮಂದಿಗೆ ಮಂದಿ ಐಸಿಯುನಲ್ಲಿದ್ದು, ಬೆಂಗಳೂರಿನಲ್ಲಿ 69, ಕಲಬುರಗಿ 12, ತುಮಕೂರು 9 ಮಂದಿ, ಉಡುಪಿಯಲ್ಲಿ 7 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.






 Advertisement 




Sign in to your account
Username or Email Address


Password

 Remember Me


