ಹಾಸನ: ಬೌನ್ಸ್ ಸ್ಕೂಟರ್ ನಿಲ್ಲಿಸಿದ್ದ ಕಟ್ಟಡಕ್ಕೆ ಬೆಂಕಿ ಬಿದ್ದ ಪರಿಣಾಮ ಸುಮಾರು 50ಕ್ಕೂ ಹೆಚ್ಚು ಸ್ಕೂಟರ್‌ಗಳು ಬೆಂಕಿಗಾಹುತಿಯಾಗಿದ್ದು, ಕಟ್ಟಡ ಭಾಗಶಃ ಬೆಂಕಿಗಾಹುತಿಯಾಗಿದೆ.ಬೆಳಗ್ಗೆ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡ ತಕ್ಷಣ ಸ್ಥಳೀಯರು ಗಮನಿಸಿ ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಬರುವ ವೇಳೆಗೆ ಬೆಂಕಿ ತೀವ್ರವಾಗಿ ವ್ಯಾಪಿಸಿದ್ದು ಕಟ್ಟಡದ ಒಳಗಿದ್ದ ಬೈಕ್‍ಗಳು ಒಂದಾದ ಮೇಲೆ ಒಂದರಂತೆ ಬೆಂಕಿಗಾಹುತಿಯಾಗಿವೆ. ಜೊತೆಗೆ ಬ್ಯಾಟರಿಗಳು ಬ್ಲಾಸ್ಟ್ ಆಗಲಾರಂಭಿಸಿವೆ.ಸ್ಥಳೀಯರು ಕಟ್ಟಡದ ಹೊರಗಡೆ ನಿಲ್ಲಿಸಿದ್ದ ಬೈಕ್‍ಗಳಿಗೆ ಹಾನಿಯಾಗದಂತೆ ದೂರ ನಿಲ್ಲಿಸಿ ಮಾನವೀಯತೆ ಮೆರೆದಿದ್ದಾರೆ. ತಕ್ಷಣ ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದು ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ. ಬೆಂಕಿ ಅನಾಹುತದಿಂದ ಕಟ್ಟಡ ಮಾಲೀಕರು, ಬೌನ್ಸ್ ಬೈಕ್ ಮಾಲೀಕರು ಕಂಗಾಲಾಗಿದ್ದು ಕಣ್ಣೀರು ಹಾಕುತ್ತಿದ್ದಾರೆ.Sign in to your account
Username or Email Address


Password

 Remember Me


