ಹುಬ್ಬಳ್ಳಿ: ಚಾಲಕನ ನಿಯಂತ್ರಣ ತಪ್ಪಿ ಕಾರು ಬೈಕ್‍ಗೆ ಡಿಕ್ಕಿ ಹೊಡೆದ ಪರಿಣಾಮ ಹಿಂಬದಿ ಮತ್ತು ಮುಂಭಾಗದಲ್ಲಿದ್ದ ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿದೆ.ಹುಬ್ಬಳ್ಳಿಯ ನವನಗರದಲ್ಲಿರುವ ಕ್ಯಾನ್ಸರ್ ಆಸ್ಪತ್ರೆ ಬಳಿ ಘಟನೆ ನಡೆದಿದ್ದು, ದೇವರಾಜ್ ಮೇಲಗಿರಿ ಎಂಬುವರ ಕಾರು ನಿಯಂತ್ರಣ ತಪ್ಪಿ ಮೊದಲು ಕಾರೊಂದಕ್ಕೆ ಡಿಕ್ಕಿ ಹೊಡೆದಿದೆ. ನಂತರ ಬೈಕ್‍ಗೆ ಡಿಕ್ಕಿ ಹೊಡೆದ ಪರಿಣಾಮ ಸರಣಿ ಅಪಘಾತ ನಡೆದಿದೆ.ಅಪಘಾತದಲ್ಲಿ ನಾಲ್ವರಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಉತ್ತರ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.






 Advertisement 




Sign in to your account
Username or Email Address


Password

 Remember Me


