ಉಜಿರೆ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಂಗಳವಾರ ರಾತ್ರಿ ಧರ್ಮಸ್ಥಳಕ್ಕೆ ಭೇಟಿ ನೀಡಿ ದೇವರ ದರ್ಶನ ಮಾಡಿದರು.ಇದೇ ವೇಳೆ ಅವರು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ವೀರೇಂದ್ರ ಹೆಗ್ಗಡೆ ಅವರು ಡಿಕೆ ಶಿವಕುಮಾರ್ ಅವರನ್ನು ಕ್ಷೇತ್ರದ ಪರವಾಗಿ ಗೌರವಿಸಿದರು. ಧರ್ಮಸ್ಥಳದ ಶ್ರೀ ಸನ್ನಿಧಿ ಅತಿಥಿ ಗೃಹದಲ್ಲಿ ತಂಗಿದ್ದ ಅವರು ಬುಧವಾರ ಬೆಳಿಗ್ಗೆ ಬೆಂಗಳೂರಿಗೆ ಪ್ರಯಾಣ ಬೆಳೆಸಿದರು.Sign in to your account
Username or Email Address


Password

 Remember Me


