ಹಾಸನ: 16 ವರ್ಷದ ಹುಡುಗಿಯೊಬ್ಬಳ ಶವ ಕೆರೆಯಲ್ಲಿ ಪತ್ತೆಯಾಗಿದ್ದು, ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿದೆ ಎಂದು ಪೋಷಕರು ಆರೋಪ ಮಾಡುತ್ತಿದ್ದಾರೆ.ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಕೆರಗೋಡು ಗ್ರಾಮದ ಹುಡುಗಿ ಮೃತ ದುರ್ದೈವಿ. ಅದೇ ಗ್ರಾಮದ ಯುವಕನೊಬ್ಬನ ಮೇಲೆ ಪೋಷಕರು ಅತ್ಯಾಚಾರ ಮತ್ತು ಕೊಲೆ ಆರೋಪ ಮಾಡುತ್ತಿದ್ದಾರೆ.ಯುವಕ ತಮ್ಮ ಮಗಳನ್ನು ಪ್ರೀತಿಸುವಂತೆ ದುಂಬಾಲು ಬಿದ್ದಿದ್ದು, ನೀನಿಲ್ಲದೆ ನಾನು ಬದುಕುವುದಿಲ್ಲ ಎಂದು ಹೇಳಿ ಫೋನ್ ಮಾಡಿ ಕರೆಸಿಕೊಂಡಿದ್ದ. ಆನಂತರ ಆತ ಸ್ನೇಹಿತರೊಂದಿಗೆ ಸೇರಿ ಅತ್ಯಾಚಾರ ಮಾಡಿ ಕೊಲೆ ಮಾಡಿದ್ದಾನೆ ಎಂದು ಪೋಷಕರು ಆರೋಪಿಸುತ್ತಿದ್ದಾರೆ.ಈ ಬಗ್ಗೆ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕೆಂದು ಪೋಷಕರು ಆಗ್ರಹಿಸಿದ್ದಾರೆ. ಘಟನೆ ಸಂಬಂಧ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Sign in to your account
Username or Email Address


Password

 Remember Me


