ಬೆಂಗಳೂರು: ನಿವೃತ್ತ ಪೊಲೀಸಪ್ಪನೊಬ್ಬ ಮೂಕ ಪ್ರಾಣಿಯ ಮೇಲೆ ದರ್ಪ ತೋರಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.ಹೌದು. ಸಂಚಾರಿ ನಿವೃತ್ತ ಇನ್ಸ್ ಪೆಕ್ಟರ್ ನಾಗೇಶ್, ರಸ್ತೆಯಲ್ಲಿ ಮಲಗಿದ್ದ ಶ್ವಾನದ ಮೇಲೆ ಕಾರು ಹರಿಸಿ ವಿಕೃತಿ ಮೆರೆದಿದ್ದಾರೆ. ಶ್ವಾನದ ಮೇಲೆ ಕಾರು ಹಾಯಿಸಿದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.ರಸ್ತೆಯಲ್ಲಿ ಶ್ವಾನ ತನ್ನ ಪಾಡಿಗೆ ಮಲಗಿತ್ತು. ಈ ವೇಳೆ ಅದೇ ದಾರಿಯಲ್ಲಿ ವಾಹನದಲ್ಲಿ ಬಂದ ನಾಗೇಶ್ ಹಾರ್ನ್ ಮಾಡಿದ್ದಾರೆ. ಆದರೆ ಇದಕ್ಕೆ ಶ್ವಾನ ಕ್ಯಾರೇ ಎನ್ನದೆ ಮಲಗಿತ್ತು. ಈ ಹಿನ್ನೆಲೆಯಲ್ಲಿ ಸಿಟ್ಟಿಗೆದ್ದ ನಾಗೇಶ್ ಅದರ ಮೇಲೆ ಕಾರು ಹರಿಸಿದ್ದಾರೆ. ಈ ದೃಶ್ಯ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಪ್ರಾಣಿ ಪ್ರಿಯರು ನಾಗೇಶ್ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.ಸದ್ಯ ಶ್ವಾನದ ಮಾಲೀಕ ಹುಳಿಮಾವು ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.






 Advertisement 




Sign in to your account
Username or Email Address


Password

 Remember Me


