ಬೆಂಗಳೂರು: ಅರಣ್ಯ ಸಚಿವ ಅರವಿಂದ ಲಿಂಬಾವಳಿ ಇಂದು ಸಾಲುಮರದ ತಿಮ್ಮಕ್ಕ ಅವರ ಮನೆಗೆ ತೆರಳಿ ಸಲಹೆ, ಸೂಚನೆಗಳನ್ನು ಪಡೆದಿದ್ದಾರೆ.ದಾಸರಹಳ್ಳಿಯ ಮಂಜುನಾಥ ನಗರದಲ್ಲಿರುವ ವೃಕ್ಷ ಮಾತೆ, 110 ವಯಸ್ಸಿನ ಸಾಲುಮರದ ತಿಮ್ಮಕ್ಕ ರವರ ಮನೆಗೆ ಭೇಟಿ ನೀಡಿ, ಅವರ ಯೋಗಕ್ಷೇಮ ವಿಚಾರಿಸಿ, ಅರಣ್ಯ ಇಲಾಖೆಗೆ ಸಂಬಂಧಿಸಿದಂತೆ ಸಲಹೆ, ಸೂಚನೆಗಳನ್ನು ಪಡೆಯಲಾಯಿತು ಎಂದು ಲಿಂಬಾವಳಿ ಟ್ವೀಟ್‌ ಮಾಡಿದ್ದಾರೆ.ಅರಣ್ಯ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ದಾಸರಹಳ್ಳಿಯ ಮಂಜುನಾಥ ನಗರದಲ್ಲಿರುವ ವೃಕ್ಷ ಮಾತೆ, 110 ವಯಸ್ಸಿನ ಸಾಲುಮರದ ತಿಮ್ಮಕ್ಕ ರವರ ಮನೆಗೆ ಭೇಟಿ ನೀಡಿ, ಅವರ ಯೋಗಕ್ಷೇಮ ವಿಚಾರಿಸಿ, ಅರಣ್ಯ ಇಲಾಖೆಗೆ ಸಂಬಂಧಿಸಿದಂತೆ ಸಲಹೆ, ಸೂಚನೆಗಳನ್ನು ಪಡೆಯಲಾಯಿತು. pic.twitter.com/iCL2vICSgm— Aravind Limbavali (@ArvindLBJP) January 26, 2021ಈ ಸಂದರ್ಭದಲ್ಲಿ ಅರಣ್ಯ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.Sign in to your account
Username or Email Address


Password

 Remember Me


