ಬೆಂಗಳೂರು: ಇಂದು ಕರ್ನಾಟಕದಲ್ಲಿ 375 ಮಂದಿಗೆ ಕೊರೊನಾ ಬಂದಿದ್ದು, ಆಸ್ಪತ್ರೆಯಿಂದ 1,036 ಜನ ಡಿಸ್ಚಾರ್ಜ್‌ ಆಗಿದ್ದಾರೆ. 3 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.ಇಂದು ಒಟ್ಟು 85,422 ಮಂದಿಗೆ ಲಸಿಕೆ ನೀಡಲು ಯೋಜನೆ ಹಾಕಿಕೊಳ್ಳಲಾಗಿತ್ತು. ಈ ಪೈಕಿ 32,277 (ಶೇ.38)ಮಂದಿ ಲಸಿಕೆ ಹಾಕಿಸಿಕೊಂಡಿದ್ದಾರೆ.ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 9,36,426ಕ್ಕೆ ಏರಿಕೆ ಆಗಿದೆ. ಈ ಪೈಕಿ 9,17,361 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ 6,846 ಸಕ್ರಿಯ ಪ್ರಕರಣಗಳಿವೆ.ಒಟ್ಟು ಇಲ್ಲಿಯವರೆಗೆ 12,200 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಸದ್ಯ 152 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು 2,129 ಆಂಟಿಜನ್‌ ಟೆಸ್ಟ್‌, 57,298 ಆರ್‌ಟಿ ಪಿಸಿಆರ್‌ ಸೇರಿದಂತೆ ಒಟ್ಟು 59,427 ಪರೀಕ್ಷೆ ಮಾಡಲಾಗಿದೆ.ಎಂದಿನಂತೆ ಬೆಂಗಳೂರು ನಗರದಲ್ಲಿ 200 ಮಂದಿಗೆ ಸೋಂಕು ಬಂದಿದೆ. ದಕ್ಷಿಣ ಕನ್ನಡ 31, ಮೈಸೂರು 27, ಕಲಬುರಗಿ 20 ಮಂದಿಗೆ ಸೋಂಕು ಬಂದಿದೆ. ಒಟ್ಟು 152 ಮಂದಿಗೆ ಮಂದಿ ಐಸಿಯುನಲ್ಲಿದ್ದು, ಬೆಂಗಳೂರಿನಲ್ಲಿ 70, ಕಲಬುರಗಿ 10, ತುಮಕೂರು 9 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. Sign in to your account
Username or Email Address


Password

 Remember Me


