ಬೆಂಗಳೂರು: ರಾಜ್ಯದಲ್ಲಿ 573 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದ್ದು, 401 ಜನ ಗುಣಮುಖರಾಗಿ ಆಸ್ಪತೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ 2,015 ಜನರು ಕೊರೊನಾ ಲಸಿಕೆಯನ್ನ ಪಡೆದುಕೊಂಡಿದ್ದಾರೆ. ಬಳ್ಳಾರಿ 387, ಬೆಂಗಳೂರು ನಗರ 845, ಧಾರವಾಡ 744 ಮತ್ತು ಗದಗನಲ್ಲಿ 39 ಜನರಿಗೆ ಕೊರೊನಾ ಲಸಿಕೆ ನೀಡಲಾಗಿದೆ.ರಾಜ್ಯದಲ್ಲಿ 7,510 ಕೊರೊನಾ ಸಕ್ರಿಯ ಪ್ರಕರಣಗಳಿದ್ದು, 155 ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಇಂದು ಕೊರೊನಾಗೆ ನಾಲ್ವರು ಮೃತಪಟ್ಟಿದ್ದು, ಸಾವನ್ನಪ್ಪಿದವರ ಸಂಖ್ಯೆ 12,197ಕ್ಕೆ ಏರಿಕೆಯಾಗಿದೆ. ರಾಜ್ಯದಲಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 9,36,051ಕ್ಕೆ ಏರಿದೆ. ಕೋವಿಡ್ 19 ಸೋಂಕಿನ ಖಚಿತ ಪ್ರಮಾಣ ಶೇ.0.70 ಮತ್ತು ಮರಣ ಪ್ರಮಾಣ ಶೇ.0.69ರಷ್ಟಿದೆ.ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 0, ಬಳ್ಳಾರಿ 6, ಬೆಳಗಾವಿ 18, ಬೆಂಗಳೂರು ಗ್ರಾಮಾಂತರ 9, ಬೆಂಗಳೂರು ನಗರ 306, ಬೀದರ್ 2, ಚಾಮರಾಜನಗರ 2, ಚಿಕ್ಕಬಳ್ಳಾಪುರ 19, ಚಿಕ್ಕಮಗಳೂರು 4, ಚಿತ್ರದುರ್ಗ 7, ದಕ್ಷಿಣ ಕನ್ನಡ 42, ದಾವಣಗೆರೆ 10, ಧಾರವಾಡ 7, ಗದಗ 5, ಹಾಸನ 15, ಹಾವೇರಿ 3, ಕಲಬುರಗಿ 16, ಕೊಡಗು 5, ಕೋಲಾರ 1, ಕೊಪ್ಪಳ 0, ಮಂಡ್ಯ 5, ಮೈಸೂರು 27, ರಾಯಚೂರು 1, ರಾಮನಗರ 0, ಶಿವಮೊಗ್ಗ 5, ತುಮಕೂರು 31, ಉಡುಪಿ 17, ಉತ್ತರ ಕನ್ನಡ 8, ವಿಜಯಪುರ 2 ಮತ್ತು ಯಾದಗಿರಿಯಲ್ಲಿ 0 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ.Sign in to your account
Username or Email Address


Password

 Remember Me


