ಬೆಂಗಳೂರು: ಪ್ರಥಮ ದರ್ಜೆ ಸಹಾಯಕ ಪರೀಕ್ಷೆಗಳ(ಎಫ್‌ಡಿಎ) ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿ ಬಂಧನಕ್ಕೊಳಗಾದ ಆರೋಪಿಗಳ ವಿಚಾರಣೆಯ ವೇಳೆ ಸ್ಫೋಟಕ ವಿಚಾರಗಳು ಹೊರಬರುತ್ತಿವೆ.ಸಿಸಿಬಿ ಪೊಲೀಸರು ಶನಿವಾರ ಈ ಪ್ರಕರಣದ ಸಂಬಂಧ 6 ಮಂದಿಯನ್ನು ಬಂಧಿಸಿದ್ದರು. ನಿನ್ನೆ ರಾತ್ರಿ ಮತ್ತು ಇಂದು ಒಟ್ಟು 8 ಮಂದಿಯನ್ನು ಬಂಧಿಸಿದ್ದು, ಈ ಪ್ರಕರಣದಲ್ಲಿ ಬಂಧನಕ್ಕೆ ಒಳಗಾದವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ಈ ಪೈಕಿ ಹಲವು ಮಂದಿ ನಾಪತ್ತೆಯಾಗಿದ್ದು, ಅವರ ಬಂಧನಕ್ಕೆ ಬಲೆ ಬೀಸಲಾಗಿದೆ.ಬಂಧಿತರಿಂದ ಒಟ್ಟು 36 ಲಕ್ಷ ನಗದು ಹಣವನ್ನು ವಶಕ್ಕೆ ಪಡೆಯಲಾಗಿದ್ದು, ಬಂಧಿತರ ಪೈಕಿ ಕೆಲವರು ಅಭ್ಯರ್ಥಿಗಳಾಗಿರುವುದು ವಿಶೇಷ.ಕೆಪಿಎಸ್‌ಸಿಯಿಂದಲೇ ಸೋರಿಕೆ: ಈ ಕೃತ್ಯದ ಹಿಂದೆ ಇಬ್ಬರ ಮೇಲೆ ಸಿಸಿಬಿಗೆ ಬಲವಾದ ಅನುಮಾನವಿದೆ. ಈ ಪ್ರಕರಣ ಬೆಳಕಿಗೆ ಬಂದ ನಂತರ ಎಫ್‌ಡಿಎ ದರ್ಜೆಯ ಇಬ್ಬರು ಅಧಿಕಾರಿಗಳ ಮೊಬೈಲ್‌ ಸ್ವಿಚ್‌ ಆಫ್‌ ಆಗಿದ್ದು ನಾಪತ್ತೆಯಾಗಿದ್ದಾರೆ.  ಬಂಧಿತರು ನೀಡಿದ ಮಾಹಿತಿಯ ಮೇರೆಗೆ ಇಬ್ಬರನ್ನು ವಿಚಾರಣೆ ನಡೆಸಲು ಸಿಸಿಬಿ ಮುಂದಾಗಿತ್ತು. ಆದರೆ ಆರೋಪಿಗಳ ಬಂಧನ ಸುದ್ದಿ ಪ್ರಕಟವಾಗುತ್ತಿದ್ದಂತೆ ಇಬ್ಬರು ನಾಪತ್ತೆಯಾಗಿದ್ದಾರೆ.  ನಾಪತ್ತೆಯಾಗಿರುವ ಈ ಇಬ್ಬರಿಂದಲೇ ಪ್ರಶ್ನೆಪತ್ರಿಕೆ ಸೋರಿಕೆಯಾಗಿರಬಹುದು ಎಂಬ ಅನುಮಾನ ಸಿಸಿಬಿಯದ್ದು.ಇಂದು ಎಫ್‌ಡಿಎ ಪರೀಕ್ಷೆ ನಡೆಯಬೇಕಿತ್ತು. ಆದರೆ ಪರೀಕ್ಷೆ ನಡೆಯುವ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಖಚಿತ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಸರ್ಕಾರ ಪರೀಕ್ಷೆಯನ್ನು ಮುಂದೂಡಿದೆ.Sign in to your account
Username or Email Address


Password

 Remember Me


