ಬಳ್ಳಾರಿ: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗೆ ಆಗ್ರಹಿಸಿ ನಡೆಯುತ್ತಿರುವ ಪಾದಯಾತ್ರೆಯಲ್ಲಿ ಭಾಗವಹಿಸಲು ಬರುತ್ತಿದ್ದ ವೃದ್ಧರೊಬ್ಬರು ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ.ಬಳ್ಳಾರಿ ಜಿಲ್ಲೆಯ ಹಗರಿಬೊಮ್ಮನಹಳ್ಳಿ ಬಳಿ ಘಟನೆ ನಡೆದಿದೆ, ಮೃತ ವೃದ್ಧ ಈಶಪ್ಪ ಮೋರಗೇರಿ (65) ಆಗಿದ್ದಾರೆ. ಇವರು ಮೂಲತಃ ಹೂವಿನ ಹಡಗಲಿಯ ತುಪ್ಪದವರಾಗಿದ್ದಾರೆ. ಪಾದಯಾತ್ರೆಗೆ ಬರುವ ಸಮಯದಲ್ಲಿ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.ಪಂಚಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಆಗ್ರಹಿಸಿ ನಡೆಯುತ್ತಿರುವ ಪಾದಯಾತ್ರೆಗೆ ಬರುತ್ತಿದ್ದರು. ಟ್ರ್ಯಾಕ್ಟರ್‌ನಲ್ಲಿ ಅವರು ಕುಳಿತುಕೊಂಡಿದ್ದಾಗ, ಆಯ ತಪ್ಪಿ ರಸ್ತೆಯಲ್ಲಿ ಬಿದ್ದಿದ್ದಾರೆ. ಬಳಿಕ ಅವರ ಮೇಲೆ ಬಸ್ ಹರಿದು ಸ್ಥಳದಲ್ಲಿ ಮೃತಪಟ್ಟಿದ್ದಾರೆ. ಇನ್ನು ಬಳಿಕ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ತುಪ್ಪದ ಈಶಪ್ಪ ಮೋರಗೇರಿ ಅವರ ನಿಧನ ಹಿನ್ನೆಲೆ ಮೌನಾಚರಣೆ ಮಾಡಲಾಯಿತು. ಈ ಸಂಬಂಧ ಹಗರಿ ಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.






 Advertisement 




Sign in to your account
Username or Email Address


Password

 Remember Me


