ಚಿಕ್ಕಮಗಳೂರು: ಖಾತೆ ಕಗ್ಗಂಟು ಮುಗಿಯುತ್ತಿದ್ದಂತೆ ಇದೀಗ ಬಿಜೆಪಿಯ ಮತ್ತೊಂದು ಸ್ಫೋಟಕ ಸುದ್ದಿ ಹೊರ ಬಿದ್ದಿದೆ. ಈ ಮೂಲಕ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಮತ್ತೊಂದು ತಲೆ ನೋವು ಶುರುವಾಗಿದೆ.ಹೌದು. ಖಾತೆ ಅಸಮಾಧಾನದ ಮಧ್ಯೆ ಇದೀಗ ರೆಸಾರ್ಟ್ ರಾಜಕೀಯ ಆರಂಭವಾಗಿದೆ. ಈ ವಿಚಾರ ರಾಜ್ಯ ರಾಜಕೀಯದಲ್ಲಿ ಮತ್ತೆ ಸಂಚಲನ ಮೂಡಿಸಿದೆ. ಕಾಫಿನಾಡು ಚಿಕ್ಕಮಗಳೂರಲ್ಲಿ ರಮೇಶ್ ಜಾರಕಿಹೊಳಿ ನೇತೃತ್ವದಲ್ಲಿ ಗೌಪ್ಯಸಭೆ ನಡೆಯುತ್ತಿದೆ. ನಿನ್ನೆ ರಾತ್ರಿಯೇ ನಾಲ್ವರು ಸಚಿವರು ರೆಸಾರ್ಟ್ ನಲ್ಲಿ ವಾಸ್ತವ್ಯ ಹೂಡಿದ್ದಾರೆ.ಚಿಕ್ಕಮಗಳೂರು ಹೊರವಲಯದ ಸರಾಯ್ ರೆಸಾರ್ಟ್ ನಲ್ಲಿ ಅತೃಪ್ತರ ಸಭೆ ನಡೆಯುತ್ತಿದೆ. ಈ ಸಭೆಯಲ್ಲಿ ಸಿ.ಪಿ ಯೋಗೇಶ್ವರ್, ಗೋಪಾಲಯ್ಯ, ಶಾಸಕ ಎಂಪಿ ಕುಮಾರಸ್ವಾಮಿ ಸೇರಿದಂತೆ ಹಲವರು ಭಾಗಿಯಾಗಿರುವ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.ಸದ್ಯ ಗೌಪ್ಯ ಸಭೆಯಿಂದಾಗಿ ಬಿಜೆಪಿ ಸರ್ಕಾರ ರಚನೆಗೆ ಕಾರಣವಾಗಿದ್ದ ಸಚಿವ ರಮೇಶ್ ಜಾರಕಿಹೊಳಿಯಿಂದಲೇ ಇದೀಗ ಸರ್ಕಾರ ಕೆಡವಲು ಪ್ರಯತ್ನ ನಡೀತಿದೆಯಾ ಎಂಬ ಅನುಮಾನ ಎದ್ದಿದೆ.






 Advertisement 




Sign in to your account
Username or Email Address


Password

 Remember Me


