ಹಾವೇರಿ: ಪತ್ನಿಯನ್ನ ಮಚ್ಚಿನಿಂದ ಹೊಡೆದು ನಂತರ ತಾನೂ ಚಾಕುವಿನಿಂದ ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿ ಇಬ್ಬರು ಗಂಭೀರ ಗಾಯಗೊಂಡ ಘಟನೆ ಹಾವೇರಿ ಜಿಲ್ಲೆ ರಾಣೆಬೆನ್ನೂರು ನಗರದ ಹಲಗೇರಿ ರಸ್ತೆಯಲ್ಲಿ ನಡೆದಿದೆ.ಮಾದೇವಕ್ಕ ತಂಬೂರಿ (45) ಈಕೆ ಪತಿ ಮೈಲಪ್ಪ ತಂಬೂರಿ (50) ಎಂದು ಗುರುತಿಸಲಾಗಿದೆ. ಈ ಘಟನೆಯಲ್ಲಿ ದಂಪತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ನಡು ರಸ್ತೆಯಲ್ಲಿ ರಕ್ತದ ಮಡುವಿನಲ್ಲಿ ಬಿದ್ದು ಹೊರಳಾಡಿದ್ದಾರೆ.ಕಳೆದ ಒಂದು ತಿಂಗಳಿನಿಂದ ದಂಪತಿ ನಿರಂತರವಾಗಿ ಜಗಳ ಮಾಡುತ್ತಿದ್ದರು. ಜಗಳದಿಂದ ಪತ್ನಿ ಮಹಾದೇವಕ್ಕ ತವರು ಮನೆಗೆ ಹೋಗಿದ್ದಳು. ಬುಡಪನಹಳ್ಳಿ ಗ್ರಾಮದಿಂದ ಪ್ರತಿನಿತ್ಯ ರಾಣೇಬೆನ್ನೂರು ನಗರಕ್ಕೆ ಕೆಲಸಕ್ಕೆ ಬರುತ್ತಿದ್ದಳು. ಇಂದು ಆಕೆಯ ಪತಿ ಮೈಲಪ್ಪ ಮಚ್ಚಿನಿಂದ ಹೊಡೆದು ಹಲ್ಲೆ ಮಾಡಿದ್ದಾನೆ. ಬಳಿಕ ತಾನೂ ಚಾಕು ಹಾಕಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ರಾಣೆಬೆನ್ನೂರು ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.ಪೊಲೀಸರು ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿ ಆಸ್ಪತ್ರೆಗೆ ಸೇರಿಸಿದ್ದಾರೆ. ನಂತರ ಗಂಭೀರವಾಗಿ ಗಾಯಗೊಂಡಿದ್ದರಿಂದ ಪತಿ ಮತ್ತು ಪತ್ನಿ ದಾವಣಗೆರೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಬ್ಬರು ಚಿಕಿತ್ಸೆಯನ್ನು ಪಡೆದುಕೊಳ್ಳುತ್ತಿದ್ದಾರೆ. ಸ್ಥಳಕ್ಕೆ ರಾಣೆಬೆನ್ನೂರು ನಗರ ಪೊಲೀಸ್ ಠಾಣೆ ಪಿಎಸ್‍ಐ ಪ್ರಭು ಕೆಳಗಿನಮನಿ ಹಾಗೂ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.






 Advertisement 




Sign in to your account
Username or Email Address


Password

 Remember Me


