ಬೀದರ್ : ಕಲ್ಲಿನಿಂದ ಹೊಡೆದು, ಉಸಿರುಗಟ್ಟಿಸಿ ವ್ಯಕ್ತಿಯೋರ್ವನನ್ನು ದುಷ್ಕರ್ಮಿಗಳು ಬರ್ಬರವಾಗಿ ಕೊಲೆ ಮಾಡಿದ ಘಟನೆ ಬೀದರ್ ನಲ್ಲಿ ನಡೆದಿದೆ.ಕೊಲೆಯಾದ ವ್ಯಕ್ತಿಯನ್ನು 38 ವರ್ಷದ ರೇವಣಸಿದ್ದ ಎಂದು ಗುರುತಿಸಲಾಗಿದೆ. ಮೂಲತಃ ಬೀದರ್ ತಾಲೂಕಿನ ಶಿರಸಿ ಗ್ರಾಮದವರಾಗಿದ್ದ ರೇವಣಸಿದ್ದ ತನ್ನ ಹೆಂಡತಿ ಊರಲ್ಲಿ ಜಾತ್ರೆ ಇದ್ದ ಕಾರಣ ಬೀದರ್ ಜಿಲ್ಲೆಯ ಹುಮ್ನಬಾದ್ ತಾಲೂಕಿನ ನಂದಗಾಂವ್ ಗ್ರಾಮಕ್ಕೆ ಎರಡು ದಿನಗಳ ಹಿಂದೆ ಹೋಗಿದ್ದರು.ಹೆಂಡತಿಯ ಊರಾದ ಬೀದರ್ ಜಿಲ್ಲೆಯ ಹುಮ್ನಬಾದ್ ತಾಲೂಕಿನ ನಂದಗಾಂವ್ ಗ್ರಾಮದ ಜಮೀನಿನಲ್ಲಿ ರೇವಣಸಿದ್ದ ಅವರನ್ನು ಕೊಲೆ ಮಾಡಲಾಗಿದೆ. ಕೊಲೆಗೆ ನಿಖರವಾದ ಕಾರಣ ಇನ್ನು ತಿಳಿದು ಬಂದಿಲ್ಲಾ. ಕೊಲೆಯ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಹಳ್ಳಿಖೇಡ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.






 Advertisement 




Sign in to your account
Username or Email Address


Password

 Remember Me


