ವಿಜಯಪುರ: ಜಮೀನು ವಿಚಾರವಾಗಿ ಸಂಬಂಧಿಕರ ಮಧ್ಯೆ ಜಗಳ ಪ್ರಾರಂಭವಾಗಿ ಅದು ವಿಕೋಪಕ್ಕೆ ತಿರುಗಿ ಓರ್ವ ವ್ಯಕ್ತಿಯ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲೋಣಿ ಕೆ.ಡಿ ಗ್ರಾಮದಲ್ಲಿ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಮಚ್ಚೇಂದ್ರ ಪಟಗಾರ (55) ಎಂದು ಗುರುತಿಸಲಾಗಿದೆ. ಮಚ್ಚೇಂದ್ರ ಪಟಗಾರ ಮತ್ತು ಅವರ ಸಂಬಂಧಿಕರ ನಡುವೆ ಆಸ್ತಿ ವಿಚಾರವಾಗಿ ಕೆಲದಿನಗಳಿಂದ ಕಿತ್ತಾಟ ನಡೆಯುತ್ತಿತ್ತು.ಈ ವಿಚಾರ ತಾರಕಕ್ಕೆ ಹೋಗಿ ಸಂಬಂಧಿಕರೇ ಮಾರಕಾಸ್ತ್ರಗಳಿಂದ ಕೊಲೆಗೈದು ಪರಾರಿಯಾಗಿದ್ದಾರೆ. ಇದೀಗ ಕೊಲೆಯಾದ ಮಚ್ಚೇಂದ್ರ ಕುಟುಂಬದ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಇಂಡಿ ಗ್ರಾಮೀಣ ಠಾಣೆಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.






 Advertisement 




Sign in to your account
Username or Email Address


Password

 Remember Me


