ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಪುತ್ರ, ನಟ ನಿಖಿಲ್ ಕುಮಾರ್ ಅವರಿಗೆ ಇಂದು 31ನೇ ಹುಟ್ಟುಹಬ್ಬದ ಸಂಭ್ರಮ. ಈ ಹಿನ್ನೆಲೆಯಲ್ಲಿ ಇದೀಗ ನಟನಿಗೆ ಗಣ್ಯರು ಸೇರಿದಂತೆ ಅಭಿಮಾನಿಗಳು ವಿಶ್ ಮಾಡುತ್ತಿದ್ದಾರೆ.ಬೆಂಗಳೂರಿನ ಜೆಪಿ ನಗರ ನಿವಾಸದಲ್ಲಿ 100 ಕೆಜಿಯ ಕೇಕ್ ಕತ್ತರಿಸಿ ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸಿದ್ದಾರೆ. ನಿಖಿಲ್ ರಿಂದ ಕೇಕ್ ಕಟ್ ಮಾಡಿಸಿ ಸಾವಿರಾರು ಅಭಿಮಾನಿಗಳು ಸಂಭ್ರಮಿಸಿದ್ದಾರೆ.ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ರಕ್ತದಾನ ಶಿಬಿರ, ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜನೆ ಮಾಡಲಾಗಿದೆ. ಅಲ್ಲದೆ ನಿಖಿಲ್ ಸೈನ್ಯ ಸಮಿತಿಯಿಂದ ಅಭಿಮಾನಿಗಳಿಗೆ ಊಟದ ವ್ಯವಸ್ಥೆ ಕೂಡ ಮಾಡಲಾಗಿದೆ.ಯುವರಾಜನ ಹುಟ್ಟುಹಬ್ಬದ ಪ್ರಯುಕ್ತ ಅವರಿಗೆ ಉಡುಗೊರೆಯಾಗಿ ರೈಡರ್ ಚಿತ್ರತಂಡ ಇಂದು ಸಿನಿಮಾದ ಟೀಸರ್ ರಿಲೀಸ್ ಮಾಡಿದೆ. ಸೀತಾರಾಮ ಕಲ್ಯಾಣ ನಂತರ ನಿಖಿಲ್ ಕುಮಾರಸ್ವಾಮಿ ಅಭಿನಯಿಸುತ್ತಿರುವ ಹೊಸ ಸಿನಿಮಾ ಅನೌನ್ಸ್ ಆಗಿ ಬಹಳ ಸಮಯವಾಯಿತು. ಆದರೆ ಕೊರೊನಾ ಲಾಕ್‍ಡೌನ್‍ನಿಂದಾಗಿ ಸಿನಿಮಾ ಕುರಿತಾದ ಅಪ್ಡೇಟ್ ಸಿಕ್ಕಿರಲಿಲ್ಲ. ಆ ಬಳಿಕ ಸಿನಿಮಾದ ಟೈಟಲ್ ಟೀಸರ್ ನೋಡಿದಾಗಲೇ ಇದೊಂದು ಪಕ್ಕಾ ಆ್ಯಕ್ಷನ್ ಸಿನಿಮಾ ಅನ್ನೋದು ಸ್ಪಷ್ಟವಾಗಿತ್ತು. ಈಗ ಟೀಸರ್ ನೋಡಿದ ಮೇಲಂತೂ ಸಿನಿಮಾದ ಬಗ್ಗೆ ಇದ್ದ ಕುತೂಹಲ ಮತ್ತಷ್ಟು ಹೆಚ್ಚಾಗಿದೆ.Sign in to your account
Username or Email Address


Password

 Remember Me


