ಮಂಗಳೂರು: ನಗರದ ನ್ಯೂ ಚಿತ್ರ ಬಳಿ ಕಳೆದ ತಿಂಗಳು ಕರ್ತವ್ಯ ನಿರತ ಪೊಲೀಸ್ ಮುಖ್ಯ ಪೇದೆ ಗಣೇಶ್ ಕಾಮತ್ ಅವರ ಮೇಲೆ ಕೊಲೆ ಮಾಡಲು ಯತ್ನಿಸಿದ ಪ್ರಕರಣವನ್ನು ಭೇದಿಸಿ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಮಂದಿಯನ್ನು ಬಂಧಿಸಿದ ಪೊಲೀಸ್ ತಂಡಕ್ಕೆ ವಿಶ್ವ ಹಿಂದು ಪರಿಷತ್ ವಿಭಾಗ ಕಾರ್ಯದರ್ಶಿ ಶರಣ್ ಪಂಪವೆಲ್ ಅಭಿನಂದನೆ ಸಲ್ಲಿಸಿದ್ದಾರೆ.ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್, ಪೊಲೀಸ್ ಸಹಾಯಕ ಆಯುಕ್ತರಾದ ಹರಿರಾಂ ಶಂಕರ್ ಹಾಗೂ ವಿನಯ್ ಗಾಂವ್ಕರ್ ಮತ್ತು ಪೊಲೀಸ್ ಇಲಾಖೆಯ ಕೆಲಸವನ್ನು ವಿಶ್ವ ಹಿಂದು ಪರಿಷದ್ ಶ್ಲಾಘಿಸುತ್ತದೆ ಮತ್ತು ಅಭಿನಂದನೆ ಸಲ್ಲಿಸುತ್ತದೆ.ಈ ಪ್ರಕರಣಕ್ಕೆ ಸಂಬಂದಿಸಿದಂತೆ ಬಂಧನಕ್ಕೆ ಒಳಪಟ್ಟವರು ಪಿಎಫ್‍ಐ ಮತ್ತು ಎಸ್‍ಡಿಪಿಐ ಕಾರ್ಯಕರ್ತರು. ಹಾಗಾಗಿ ಈ ಕೃತ್ಯದಲ್ಲಿ ಪಿಎಫ್‍ಐ ಮತ್ತು ಎಸ್‍ಡಿಪಿಐ ಸಂಘಟನೆಯ ಕೈವಾಡವಿರುವುದು ಸಂಶಯ ವ್ಯಕ್ತವಾಗುತ್ತದೆ. ಪೊಲೀಸ್ ಇಲಾಖೆ ತಕ್ಷಣ ಎರಡೂ ಸಂಘಟನೆಯ ಮುಖಂಡರನ್ನು ತನಿಖೆಗೆ ಒಳಪಡಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲು ವಿಶ್ವ ಹಿಂದು ಪರಿಷದ್ ಆಗ್ರಹಿಸುತ್ತದೆ ಎಂದು ವಿಶ್ವ ಹಿಂದು ಪರಿಷದ್ ವಿಭಾಗ ಕಾರ್ಯದರ್ಶಿ ಶರಣ್ ಪಂಪವೆಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.Sign in to your account
Username or Email Address


Password

 Remember Me


