ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ನಾಲ್ಕು ವರ್ಷ ಶಿಕ್ಷೆ ಅನುಭವಿಸುತ್ತಿರುವ ಶಶಿಕಲಾ ನಟರಾಜನ್ ಆರೋಗ್ಯದಲ್ಲಿ ಏರುಪೇರಾಗಿದೆ ಎಂದು ತಿಳಿದು ಬಂದಿದೆ.ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ಚಿನ್ನಮ್ಮ ನಿನ್ನೆ ರಾತ್ರಿಯಿಂದ ಉಸಿರಾಟ ತೊಂದರೆಯಿಂದ ಬಳಲುತ್ತಿದ್ದರು. ಇಂದೂ ಕೂಡಾ ಆರೋಗ್ಯ ಸುಧಾರಿಸದೇ ಜೈಲಿನ ಆಸ್ಪತ್ರೆಯಲ್ಲಿ ತಪಾಸಣೆಗೆ ಒಳಪಡಿಸಲಾಗಿದೆ.ಜೈಲಿನ ವೈದ್ಯೆ ಉಮಾ ನೇತೃತ್ವದ ನಾಲ್ವರ ವೈದ್ಯರ ತಂಡ ತಪಾಸಣೆ ನಡೆಸಿದೆ. ತೀವ್ರ ಉಸಿರಾಟದ ತೊಂದರೆ ಆಗಿರುವುದರಿಂದ ಬೇರೆ ಆಸ್ಪತ್ರೆಗೆ ಶಿಫ್ಟ್ ಮಾಡುವ ಸಾಧ್ಯತೆಯಿದೆ. ಈ ಬಗ್ಗೆ ಜೈಲಾಧಿಕಾರಿಗಳು ವೈದ್ಯರೊಂದಿಗೆ ಸಮಾಲೋಚನೆ ನಡೆಸುತ್ತಿದ್ದಾರೆ ಎಂದು ಜೈಲಿನ ಮೂಲಗಳಿಂದ ತಿಳಿದುಬಂದಿದೆ.ಇದೇ ತಿಂಗಳ 27ರಂದು ಜೈಲಿನಿಂದ ಶಶಿಕಲಾ ಬಿಡುಗಡೆಯಾಗಲಿದ್ದಾರೆ. ಜೊತೆಗೆ ಜೈಲಿಂದ ಹೊರಗಡೆ ಬಂದ ನಂತರ ಅದ್ಧೂರಿ ಮೆರವಣಿಗೆ ಮಾಡುವ ಮುಖಾಂತರ ತಮಿಳುನಾಡಿಗೆ ಹೋಗಬೇಕೆಂದು ಎಲ್ಲಾ ಸಿದ್ಧತೆ ಮಾಡಿಕೊಂಡಿದ್ದರು.Sign in to your account
Username or Email Address


Password

 Remember Me


