ಮೈಸೂರು: ವೀಕ್ ಮೈಂಡ್ ನಿಂದಲೇ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ ಎಂದು ಕೃಷಿ ಸಚಿವ ಬಿ.ಸಿ ಪಾಟೀಲ್ ಹೇಳಿದ್ದಾರೆ.ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೋ ಕಾರಣದಲ್ಲಿ ಯಾವುದೋ ಒಂದು ಟೈಂ ಅಲ್ಲಿ ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ. ಅವರ ಆತ್ಮಹತ್ಯೆ ಆಗಬಾರದು ಅಂತಾನೆ ಹಲವು ಕಾರ್ಯಕ್ರಮ ಮಾಡುತ್ತಿದ್ದೇವೆ. ರೈತರು ಆತ್ಮಹತ್ಯೆ ಮಾಡಿಕೊಂಡ ತಕ್ಷಣ ಅವರ ಮನೆಗೆ ಹೋಗಿ ಹಾರ ಹಾಕಿದ್ರೆ. ಸಾಂತ್ವನ ಹೇಳಿದ್ರೆ ಆತ್ಮಹತ್ಯೆ ನಿಲ್ಲೋಲ್ಲ. ಅದಕ್ಕೆ ಪರ್ಯಾಯವಾಗಿ ಕಾರ್ಯಕ್ರಮ ರೂಪಿಸಬೇಕು ಎಂದರು.ರೈತರ ಆತ್ಮಹತ್ಯೆಗೆ ಸರ್ಕಾರದ ನೀತಿಗಳು ಕಾರಣವಲ್ಲ. ವೀಕ್ ಮೈಂಡ್ ನಿಂದ ಕೆಲ ರೈತರು ಆತ್ಮಹತ್ಯೆ ಮಾಡಿಕೊಳ್ತಾರೆ. ಎಲ್ಲ ರೈತರು ಏನ್ ಆತ್ಮಹತ್ಯೆ ಮಾಡಿಕೊಂಡಿದ್ದಾರಾ? ಇಲ್ಲ ತಾನೆ. ರೈತರಷ್ಟೆ ಅಲ್ಲ ಬೇರೆ ಬೇರೆಯವರು ಆತ್ಮಹತ್ಯೆ ಮಾಡಿಕೊಳ್ತಾರೆ. ಉದ್ಯಮಿಗಳು, ಅಧಿಕಾರಿಗಳು ಹಾಗೂ ಇತರೇ ಕ್ಷೇತ್ರದ ಜನರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದಕ್ಕೆ ಸರ್ಕಾರದ ನೀತಿಗಳು ಕಾರಣವಲ್ಲ ಎಂದು ತಿಳಿಸಿದ್ದಾರೆ.ಸರ್ಕಾರಗಳು ತನ್ನ ಕೆಲಸ ಮಾಡುತ್ತಿವೆ. ಹಳ್ಳಿಯಲ್ಲಿರುವವರು ಬಹುತೇಕರು ರೈತರೇ ಆಗಿರುತ್ತಾರೆ. ಹಾಗಂತ ಹಳ್ಳಿಗಳಲ್ಲಿ ಆಗುವ ಎಲ್ಲ ಸಾವುಗಳು ರೈತರ ಆತ್ಮಹತ್ಯೆ ಅಂದುಕೊಳ್ಳೋಕೆ ಆಗುತ್ತಾ?. ಸಮಸ್ಯೆಗೆ ಕಾರಣ ಹುಡುಕೋದೆ ತಜ್ಞರ ಸಮಿತಿಗಳ ಕೆಲಸ. ಅವರು ನೀಡುವ ವರದಿಯಂತೆಯೆ ಸರ್ಕಾರ ತೀರ್ಮಾನ ಕೈಗೊಳ್ಳುತ್ತದೆ ಎಂದು ಬಿ.ಸಿ.ಪಾಟೀಲ್ ಹೇಳಿದ್ದಾರೆ.






 Advertisement 




Sign in to your account
Username or Email Address


Password

 Remember Me


