ಮಂಗಳೂರು: ಎಸ್‍ಡಿಪಿಐ ಮುಖಂಡನ ಮೇಲೆ ಅತ್ಯಾಚಾರ ಮತ್ತು ಪೋಕ್ಸೊ ಪ್ರಕರಣ ದಾಖಲಾಗಿದೆ.ಉಳ್ಳಾಲ ಕ್ಷೇತ್ರ ಸಮಿತಿ ಅಧ್ಯಕ್ಷ ಸಿದ್ದೀಕ್ ವಿರುದ್ಧ ಅತ್ಯಚಾರ ಮತ್ತು ಲೈಂಗಿಕ ಕಿರುಕುಳ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಮಂಗಳೂರಿನ ಹೊರವಲಯದ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮಹಿಳೆ ಮೇಲೆ ನಿರಂತರ ಅತ್ಯಾಚಾರ ಮತ್ತು ಆಕೆಯ ಇಬ್ಬರು 9 ಮತ್ತು 6 ವರ್ಷದ ಬಾಲಕಿಯರಿಗೆ ಲೈಂಗಿಕ ಕಿರುಕುಳ ಆರೋಪವನ್ನು ಸಿದ್ದೀಕ್ ಎದುರಿಸುತ್ತಿದ್ದಾನೆ.ಬ್ರಾಹ್ಮಣ ಸಮುದಾಯದಿಂದ ಮತಾಂತರಗೊಂಡ ಮಹಿಳೆ ಕೇರಳದ ಮೂಲದ ವ್ಯಕ್ತಿಯನ್ನು ಮದುವೆಯಾಗಿದ್ದಳು. ಬಳಿಕ ಗಂಡನ ಮನೆಯಿಂದ ಹೊರ ಉಳಿದಿದ್ದಳು. ಹೀಗಾಗಿ ಮಹಿಳೆಗೆ ಸಹಾಯ ಮಾಡುವ ನೆಪದಲ್ಲಿ ಸಿದ್ದಿಕ್ ಉಳ್ಳಾಲ್ ಪರಿಚಯ ಮಾಡಿಕೊಂಡಿದ್ದ. ನಂತರ ಆಕೆ ಮೇಲೆ ನಿರಂತರ ಲೈಂಗಿಕ ದೌರ್ಜನ್ಯ ಹಾಗೂ ಇಬ್ಬರು ಅಪ್ರಾಪ್ತ ಮಕ್ಕಳ ಮೇಲೂ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ.ಈ ಸಂಬಂಧ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ.Sign in to your account
Username or Email Address


Password

 Remember Me


