ಬೆಂಗಳೂರು: ಮಾಜಿ ಐಆರ್‍ಎಸ್ ಅಧಿಕಾರಿ, ಜೆಡಿಎಸ್ ನಲ್ಲಿ ಗುರುತಿಸಿಕೊಂಡಿದ್ದ ಲಕ್ಷ್ಮಿ ಆಶ್ವಿನ್ ಗೌಡ ಜೆಡಿಎಸ್ ತೊರೆದು ಬಿಜೆಪಿ ಸೇರ್ಪಡೆಯಾಗಲಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮನ ಹಿನ್ನೆಲೆ ಇಂದು ನಿಗದಿಯಾಗಿದ್ದ ಕಾರ್ಯಕ್ರಮ ಮುಂದೂಡಲಾಗಿದೆ.ಲಕ್ಷ್ಮಿ ಅಶ್ವಿನ್ ಗೌಡ ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದ್ರೆ ಲಕ್ಷಿ ಅವರಿಗೆ ಬದಲಾಗಿ ನಿಖಿಲ್ ಕುಮಾರಸ್ವಾಮಿ ಅವರಿಗೆ ಟಿಕಟ್ ನೀಡಲಾಗಿತ್ತು. ವಿಧಾನಸಭಾ ಚುನಾವಣೆಯಲ್ಲಿಯೂ ನಾಗಮಂಗಲದ ಕ್ಷೇತ್ರದ ಟೆಕೆಟ್ ಆಕಾಂಕ್ಷಿಯಾಗಿದ್ದರು. ಆದ್ರೆ ಎರಡೂ ಬಾರಿ ಟಿಕೆಟ್ ಸಿಗದ ಹಿನ್ನೆಲೆ ಲಕ್ಷ್ಮಿ ಅಶ್ವಿನ್ ಗೌಡ ತೆನೆಯ ಹೊರೆ ಇಳಿಸಿ ಕಮಲ ಮುಡಿಯಲಿದ್ದಾರೆ. ಲಕ್ಷ್ಮಿ ಅಶ್ವಿನ್ ಗೌಡ ಜೊತೆಯಲ್ಲಿ ಅಕ್ಷಯ ಗೋಲ್ಡ್ ಸಂಸ್ಥೆಯ ಮಾಲೀಕರಾದ ಸತೀಶ್ ಕೂಡ ಸೇರ್ಪಡೆಯಾಗಲಿದ್ದಾರೆ.ಲಕ್ಷ್ಮಿ ಅಶ್ವಿನ್ ಗೌಡರ ನೇತೃತ್ವದಲ್ಲಿಯೇ ಮಂಡ್ಯ ಭಾಗದಲ್ಲಿ ಬಿಜೆಪಿ ಪಕ್ಷ ಸಂಘಟನೆಗೆ ಮುಂದಾಗಲು ಪ್ಲಾನ್ ಮಾಡಿಕೊಂಡಿದೆ. ಮುಂದಿನ ವಿಧಾನಸಭಾ ಚುನಾವಣೆಯನ್ನ ಗಮನದಲ್ಲಿಟ್ಟುಕೊಂಡು ಬಿಜೆಪಿ ಲಕ್ಷ್ಮಿ ಅಶ್ವಿನ್ ಗೌಡರನ್ನ ಬರಮಾಡಿಕೊಳ್ಳಲು ಎಲ್ಲ ಸಿದ್ಧತೆ ನಡೆಸಿದೆ.Sign in to your account
Username or Email Address


Password

 Remember Me


