ಬೆಂಗಳೂರು: ಇಂದು ಕರ್ನಾಟಕದಲ್ಲಿ 708 ಮಂದಿಗೆ ಕೊರೊನಾ ಬಂದಿದ್ದು, ಆಸ್ಪತ್ರೆಯಿಂದ 643 ಜನ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು ಕೇವಲ 3 ಮಂದಿ ಸಾವನ್ನಪ್ಪಿದ್ದಾರೆ.ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 9,30,668ಕ್ಕೆ ಏರಿಕೆ ಆಗಿದೆ. ಈ ಪೈಕಿ 9,09,701 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ 8,790 ಸಕ್ರಿಯ ಪ್ರಕರಣಗಳಿವೆ.ಒಟ್ಟು ಇಲ್ಲಿಯವರೆಗೆ 12,158 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಸದ್ಯ 183 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಇಂದು 1,018 ಆಂಟಿಜನ್ ಟೆಸ್ಟ್, 83,831 ಆರ್ ಟಿ ಪಿಸಿಆರ್ ಸೇರಿದಂತೆ ಒಟ್ಟು 84,849 ಪರೀಕ್ಷೆ ಮಾಡಲಾಗಿದೆ. ಬೆಂಗಳೂರು ನಗರದಲ್ಲಿ 399, ದಕ್ಷಿಣ ಕನ್ನಡ, ಮೈಸೂರು ತಲಾ 37, ತುಮಕೂರು 29, ಕಲಬುರಗಿ 24 ಹಾಗೂ ಬೆಳಗಾವಿಯಲ್ಲಿ 21 ಮಂದಿಗೆ ಸೋಂಕು ಬಂದಿದೆ.ಐಸಿಯುನಲ್ಲಿ ಒಟ್ಟು 187 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, ಬೆಂಗಳೂರು ನಗರದಲ್ಲಿ 84, ಕಲಬುರಗಿ 15 ಹಾಗೂ ತುಮಕೂರಿನಲ್ಲಿ 9 ಮಂದಿ ಐಸಿಯುನಲ್ಲಿದ್ದಾರೆ.Sign in to your account
Username or Email Address


Password

 Remember Me


