ಬೆಂಗಳೂರು: ಶಾಸಕ ಜಮೀರ್ ಅಹ್ಮದ್ ಖಾನ್ ಕ್ಷೇತ್ರಕ್ಕೆ ಅನುದಾನ ಬಿಡುಗಡೆ ಮಾಡಲು ಗ್ರೀನ್ ಸಿಗ್ನಲ್ ನೀಡಿದ್ದರ ಕುರಿತು ಪಬ್ಲಿಕ್ ಟಿವಿ ವರದಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಪ್ರತಿಕ್ರಿಯೆ ನೀಡಿದ್ದು, ಜಮೀರ್ ಕ್ಷೇತ್ರಕ್ಕೆ ಯಾವುದೇ ಅನುದಾನ ಬಿಡುಗಡೆ ಮಾಡಿಲ್ಲ ಎಂದು ತಿಳಿಸಿದ್ದಾರೆ.ಶಾಸಕ ಜಮೀರ್ ಅಹ್ಮದ್ ಖಾನ್ ಕ್ಷೇತ್ರಕ್ಕೆ ಅನುದಾನ ಬಿಡುಗಡೆ ಮಾಡಿಲ್ಲ. ಈ ವಿಷಯ ಸತ್ಯಕ್ಕೆ ದೂರವಾದ ಮಾತು. ಇದುವರೆಗೂ ಯಾವುದೇ ಅನುದಾನ ಬಿಡುಗಡೆ ಮಾಡಿಲ್ಲ ಎಂದು ತನ್ನ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಜಮೀರ್‌ ಕ್ಷೇತ್ರಕ್ಕೆ ದಿಢೀರ್‌ 200 ಕೋಟಿ ಅನುದಾನ ಬಿಡುಗಡೆಗೆ ಗ್ರೀನ್‌ ಸಿಗ್ನಲ್‌ಪಬ್ಲಿಕ್ ಟಿವಿ ಸುದ್ದಿ ಏನಿತ್ತು?
ಚಾಮರಾಜಪೇಟೆಯ ಶಾಸಕ ಜಮೀರ್ ಅಹಮದ್ 200 ಕೋಟಿ ರೂ. ಅನುದಾನ ಬಿಡುಗಡೆ ಮಾಡಬೇಕೆಂದು ಮನವಿ ಮಾಡಿದ್ದರು. ಈ ಮನವಿಗೆ ಒಪ್ಪಿಗೆ ನೀಡಿದ ಸಿಎಂ ಈ ಪತ್ರವನ್ನು ಹಣಕಾಸು ಇಲಾಖೆಗೆ ರವಾನಿಸಿದ ಬಗ್ಗೆ ವರದಿ ಮಾಡಿತ್ತು.Sign in to your account
Username or Email Address


Password

 Remember Me


