ಹುಬ್ಬಳ್ಳಿ: ರಾಜಕಾರಣದಲ್ಲಿ ಆಸೆ ಇರುವುದು ತಪ್ಪಲ್ಲ. ಆದರೆ ಬಹಿರಂಗ ಹೇಳಿಕೆ ನೀಡುವುದು ಸರಿಯಾದ ಕ್ರಮವಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.ನಗರದಲ್ಲಿಂದು ಚೆನ್ನಮ್ಮ ವೃತ್ತದ ಸುತ್ತ ಪ್ಲೈ ಓವರ್ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೇರವೇರಿಸಿ ಮಾತನಾಡಿದ ಅವರು, ಶಾಸಕರ ಅಸಮಾಧಾನವನ್ನು ಮುಖ್ಯಮಂತ್ರಿಗಳು ಬಗೆಹರಿಸುತ್ತಾರೆ. ಆದರೆ ಸಿಡಿ ಇದೆ ಎಂದು ಹೆದರಿಸುವುದು ಸರಿಯಲ್ಲ. ಸಿಡಿ ಇದ್ದರೆ ಕೊಡಿ ಎಂದು ಸ್ವತಃ ಸಿಎಂ ಅವರೇ ಹೇಳಿದ್ದಾರೆ ಎಂದು ತಿಳಿಸಿದರು.ಅವರ ಬಳಿ ಸಿಡಿ ಇಲ್ಲ, ಏನೂ ಇಲ್ಲ ಸುಮ್ಮನೆ ಹೆದರಿಸುತ್ತಿದ್ದಾರೆ. ಇದ್ದರೆ ಬಿಡುಗಡೆ ಮಾಡಲಿ, ಇದು ಕೇವಲ ಹೆದರಿಸುವ ತಂತ್ರ. ನನ್ನ ಬಳಿ ಸಿಡಿ ಬಂದಿಲ್ಲ. ಬಂದರೆ ನಾನು ಮೊದಲು ನಿಮಗೇ ಕೊಡುತ್ತೇನೆ ಎಂದು ನಗೆಚಟಾಕಿ ಹಾರಿಸಿದರು.Sign in to your account
Username or Email Address


Password

 Remember Me


